Visit Channel

Chitra Kundapur speech

ಪ್ರಚೋದನಕಾರಿ ಭಾಷಣ ಹಿನ್ನಲೆ, ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲು

ಕಾಂಗ್ರೆಸ್ ಪಕ್ಷದ ಬಂಟ ಸಮುದಾಯಕ್ಕೆ ಸೇರಿದ ಮಾಜಿ ಸಚಿವರೊಬ್ಬರ ಮಗಳು ಮುಸ್ಲಿಂ ಯುವಕನ ಜೊತೆ ಪ್ರೇಮ ಸಂಬಂಧ ಹೊಂದಿದ್ದು, ಆತನನ್ನು ಮದುವೆಯಾಗಲು ಹಠ ಹಿಡಿದಿದ್ದಾಳೆಂದು ಭಾಷಣದಲ್ಲಿ ಉಲ್ಲೇಖಿಸಿ, ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಸಾರ್ವಜನಿಕವಾಗಿ ಹೇಳಿ, ಅವಮಾನಿಸಿದ್ದು ಅತ್ಯಂತ ಕೆಟ್ಟ ನಡವಳಿಕೆಯಾಗಿದೆ. ಇದರಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡಬಹುದು. ಪೊಲೀಸರ ಸಮ್ಮುಖದಲ್ಲಿಯೇ ಈ ರೀತಿಯ ಹೇಳಿಕೆ ನೀಡಿರುವುದರಿಂದ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಚಿತ್ತರಂಜನ್ ತಿಳಿಸಿದ್ದಾರೆ.