
ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ!
ರಾಜ್ಯ(State) ಬಿಜೆಪಿ ಸರ್ಕಾರ(BJP Government) ಮತಾಂತರ(Conversion) ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ.
ರಾಜ್ಯ(State) ಬಿಜೆಪಿ ಸರ್ಕಾರ(BJP Government) ಮತಾಂತರ(Conversion) ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದೆ.
ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದರು. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇದನ್ನು ವಿರೋಧಿಸಿ ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು. ಈ ವೇಳೆ ಕ್ರಿಶ್ಚಿಯನ್ನರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.
ರಾಜ್ಯದಲ್ಲಿ ಮತಾಂತರ ಚಟುವಟಿಕೆ ಹೆಚ್ಚುತ್ತಿರುವ ಆರೋಪದ ಬಗ್ಗೆ ವಿಕಾಸಸೌಧದಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಶಾಸಕರಾದ ಗೂಳಿಹಟ್ಟಿ ಶೇಖರ್, ಪುಟ್ಟರಂಗ ಶೆಟ್ಟಿ ಬಿ.ಎಂ. ಫಾರೂಕ್, ವಿರೂಪಾಕ್ಷಪ್ಪ ಬಳ್ಳಾರಿ, ಅಶೋಕ್ ನಾಯ್ಕ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಪಾಲ್ಗೊಂಡಿದ್ದರು.
ಕೆಲವು ದಿನಗಳ ಹಿಂದೆ ಬೆಂಗಳೂರಿನ ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ 80ಕ್ಕೂ ಅಧಿಕ ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ
ಕೇರಳ ಮೂಲದ ವ್ಯಕ್ತಿಗಳಿಂದ ಉಳ್ಳಾಲ ಭಾಗದಲ್ಲಿ ಮತಾಂತರ ನಡೆಯುತ್ತಿದೆ ಎಂದು ಇತ್ತೀಚಿನ ದಿನಗಳಲ್ಲಿ ಆರೋಪ ಮಾಡಲಾಗುತ್ತಿದ್ದು ಇದಕ್ಕೆ ಪೂರಕವೆಂಬಂತೆ ಅನೇಕ ಘಟನೆಗಳು ಬೆಳಿಕಿಗೆ ಬರುತ್ತಿವೆ.