
ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್, ರೈತರ ಹೋರಾಟಕ್ಕೆ ಮಣಿದ ಮೋದಿ ಸರ್ಕಾರ
ಪಂಜಾಬ್ ರಾಜ್ಯಾದ್ಯಂತ ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ನೂತನ ಕೃಷಿ ಕಾಯ್ದೆಗೆ (Farm Bill) ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಕೇಂದ್ರ ಸರ್ಕಾರ ರೈತರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿತಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ. ಇದರ ಬೆನ್ನಲ್ಲೇ ಗುರು ಪೂರಬ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದು, ಮೂರು ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯಲು ತೀರ್ಮಾನಿಸಿದೆ. ಇದರೊಂದಿಗೆ ವರ್ಷಗಳ ರೈತರ ಹೋರಾಟಕ್ಕೆ ಗೆಲುವು ಸಿಕ್ಕಂತೆ ಆಗಿದೆ.