
ಮೋದಿ ಸರ್ಕಾರ ರಚಿಸಿದ್ದ 3 ಕೃಷಿ ತಿದ್ದುಪಡಿ ಕಾಯ್ದೆಗಳಲ್ಲಿ ಅಂತದ್ದೇನಿತ್ತು?
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ(three farm law) ವಿರುದ್ಧ ರೈತರಿಂದ, ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆದಿದೆ.ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ(PM Narendra Modi) ಮೂರು ತಿದ್ದುಪಡಿ ಕೃಷಿ ಕಾಯ್ದೆಗಳನ್ನು ಇದೇ ತಿಂಗಳ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಹಿಂಪಡೆಯಲಾಗುವುದು ಎಂದು ಘೋಷಿಸಿದ್ದಾರೆ.