
ಜೆಡಿಎಸ್ ಹೈಕಮಾಂಡ್ ಬಿಡದಿಯಲ್ಲಿದೆ – ಹೆಚ್ ಡಿ ಕುಮಾರಸ್ವಾಮಿ
ಸಮ್ಮಿಶ್ರ ಸರಕಾರ ಹೋಗುತ್ತೆ ಅಂತ ನಂಗೆ ಗೊತ್ತಿತ್ತು. ಜನತೆಯ ಕೆಲಸ ಮಾಡಲು ಹೆಜ್ಜೆ ಹೆಜ್ಜೆಗೂ ಅಡ್ಡಿಗಳು, ಒತ್ತಡಗಳು. ಯಾವುದೇ ಸಂದರ್ಭದಲ್ಲೂ ಸರಕಾರ ಹೋಗುತ್ತದೆ ಅಂತ ಗೊತ್ತಿದ್ದೂ ನಾನು ಅಮೆರಿಕಕ್ಕೆ ಹೋದೆ. ಅಂತಹ ಹಂಗಿನ ಸರಕಾರ ನನಗೆ ಬೇಕಿರಲಿಲ್ಲ. ಮುಂದಿನ ಸಲ ಇದೇ ರೀತಿಯ ಅತಂತ್ರ ಸ್ಥಿತಿ ಬಂದರೆ ಮುಂದೆಂದೂ ನಾನು ಮತ ಕೇಳಲು ಬರುವುದಿಲ್ಲ ಎಂದಿದ್ದಾರೆ.