
ಎಲ್ಲಾ ಹಿಂದೂ ದೇವಾಲಯಗಳನ್ನು ಆರ್‌ಎಸ್ಎಸ್ ಸುಪರ್ದಿಗೆ ಕೊಡ್ಬೇಕಾ ?– ಹೆಚ್.ಡಿ. ಕುಮಾರಸ್ವಾಮಿ
ದೇವಾಲಯದ ನಿರ್ವಹಣಾ ಹಕ್ಕುಗಳನ್ನು ಹಿಂದೂಗಳಿಗೆ ನೀಡಬೇಕು ಮತ್ತು ಅದರ ಸಂಪತ್ತನ್ನು ಹಿಂದೂ ಸಮುದಾಯದ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು ಎಂದು ವಿಜಯದಶಮಿ ದಿನ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರಲ್ಲಿ ದೇಶ ಒಡೆಯುವ ಉದ್ದೇಶವಿದೆ. ದೇಶವನ್ನು ಇವರಿಗೆ ನಾವು ಗುತ್ತಿಗೆ ಕೊಟ್ಟಿದ್ದೀವಾ? ಎಂದು ಪ್ರಶ್ನಿಸಿ ಹರಿಹಾಯ್ದಿದ್ದಾರೆ.