
4ನೇ ಬಾರಿಗೆ ಐಪಿಎಲ್ ಚಾಂಪಿಯನ್ ಆದ ಚೆನ್ನೈ
ಎಂ.ಎಸ್.ಧೋನಿನಾಯಕತ್ವದಲ್ಲಿ ಚೆನ್ನೈ 4ನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಸಿಎಸ್‌ಕೆ 2010, 2011, 2018 ಮತ್ತು 2021ರಲ್ಲಿ ಟ್ರೋಫಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ. ಕಳೆದ ಟೂರ್ನಿಯಲ್ಲಿ ಲೀಗ್ ಹಂತದಲ್ಲಿಯೇ ಹೊರಬಿದ್ದಿದ್ದ ಚೆನ್ನೈ ಈ ಬಾರಿ ಫೈನಲ್ ತಲುಪಿದ ಮೊದಲ ತಂಡವಾಗಿತ್ತು. ಲೀಗ್ ಪಂದ್ಯಗಳಲ್ಲಿ ಆಡಿದ 14 ಪಂದ್ಯಗಳ ಪೈಕಿ 9 ಪಂದ್ಯಗಳನ್ನು ಧೋನಿ ಪಡೆ ಗೆದ್ದಿತ್ತು.