
ಪ್ರಾಥಮಿಕ ಶಾಲೆ ಆರಂಭ ಹಿನ್ನಲೆ, ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಕರು
ಕೊರೊನಾ ಹಿನ್ನಲೆಯಲ್ಲಿ ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರಬೇಕು ಎಂದು ಸೂಚಿಸಲಾಗಿದ್ದ ಹಿನ್ನೆಲೆಯಲ್ಲಿ ಪೋಷಕರ ಒಪ್ಪಿಗೆ ಪತ್ರ ನೀಡಿದ ಮಕ್ಕಳು ಸಾಲಾಗಿ ನಿಂತು ಅದನ್ನು ಶಾಲಾ ಸಿಬ್ಬಂದಿಗೆ ತೋರಿಸಿ ಒಳ ಬರುತ್ತಿದ್ದರು. ಬಹುತೇಕ ಶಾಲೆಗಳನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಶಾಲೆಗಳನ್ನು ಆರಂಭಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕೂಡ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಆರಂಭವಾದ ಬಹುತೇಕ ತರಗತಿಗಳಿಗೆ ಬಹುತೇಕ ಹಾಜರಾತಿ ಕಂಡುಬಂದಿದೆ