
ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ತೆಗೆದು ಹಾಕುವಂತಿಲ್ಲ ಟಾಟಾಗೆ ಸರ್ಕಾರ ಸೂಚನೆ
ಈ ಬಗ್ಗೆ ಮಾಹಿತಿ ನೀಡಿದ ವಿಮಾನಯಾನ ಸಚಿವಾಲಯ ಕಾರ್ಯದರ್ಶಿ ರಾಜೀವ್ ಬನ್ಸಲ್, ಈಗಿರುವ ಎಲ್ಲಾ ನೌಕರರ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು. ನಮ್ಮ ಬಿಡ್ಡಿಂಗ್ ನಲ್ಲಿ ಗೆದ್ದಿರುವ ಟಾಟಾ ಗ್ರೂಪ್ ನೌಕರರನ್ನು ಕಂಪೆನಿಯಲ್ಲಿ ಉಳಿಸಿಕೊಳ್ಳಬೇಕು. ಅದರರ್ಥ ಒಂದು ವರ್ಷದವರೆಗೆ ಕೆಲಸದಿಂದ ತೆಗೆದುಹಾಕುವಂತಿಲ್ಲ. ಒಂದು ವರ್ಷ ಬಳಿಕ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ಅವರಿಗೆ ಸ್ವಯಂ ನಿವೃತ್ತಿ ಯೋಜನೆಯ ಸೌಲಭ್ಯವನ್ನು ನೀಡಬೇಕು ಎಂದು ಸರ್ಕಾರ ನಿಯಮ ತಂದಿದೆ ಎಂದರು.