
ಜಾತಿ ನಿಂದನೆ ಪ್ರಕರಣದಡಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಜಾಮೀನಿನ ಮೇಲೆ ಬಿಡುಗಡೆ.
2020ರ ಜೂನ್ನಲ್ಲಿ ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್‌ನಲ್ಲಿ ಭಾಗವಹಿಸಿದ್ದ ಯುವರಾಜ್, ತಮ್ಮ ಸಂಭಾಷಣೆ ವೇಳೆ ಯಜುವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಜಾತಿ ಸೂಚಕ ಪದ ಬಳಸಿದ್ದರು. ಚಹಲ್ ಮಾಡೋ ಟಿಕ್-ಟಾಕ್ ವೀಡಿಯೊ ಬಗ್ಗೆ ಪ್ರಸ್ತಾಪಿಸಿದ್ದ ಯುವಿ , ಈ ಯುಜಿ ಹಾಗೂ ಕುಲ್ದೀಪ್ಗೆ ಬೇರೆ ಕೆಲಸ ಇಲ್ಲ ಎಂದಿದ್ದರು. ಇದೇ ವೇಳೆ ಜಾತಿಯನ್ನು ಪ್ರಸ್ತಾಪಿಸಿ ಹೀಯಾಳಿಸಿದ್ದರು.