- ರಾಜ್ಯದಲ್ಲಿ ಹೆಚ್ಚುತ್ತಿದೆ ಹೆಚ್5ಎನ್1 ವೈರಸ್ ಪ್ರಕರಣಗಳು !
- ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿದೆ ಆತಂಕ (take a break from eating chicken)
- ಗಡಿ ಜಿಲ್ಲೆಗಳಿಗೆ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ
- ವೈರಸ್ ಪತ್ತೆಯಾಗೋ ಪ್ರದೇಶದಲ್ಲಿ ಮಾಂಸ ಮಾರಾಟಕ್ಕೆ ನೀಷೇಧ
ರಾಜ್ಯದಲ್ಲಿ ದಿನೇ ದಿನೇ ಹಕ್ಕಿ ಜ್ವರ (Bird flu) ಪ್ರಕರಣ ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.ಇತ್ತ ಪೌಲ್ಟ್ರಿಫಾರಂ (Poultryforum) ಮಾಲೀಕರಲ್ಲೂ ನಡುಕ ಹೆಚ್ಚಾಗಿದೆ.ಆಂಧ್ರಪ್ರದೇಶ (Andhra Pradesh) ,ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಹೆಚ್5ಎನ್1 ವೈರಸ್ (H5N1 virus) ಪ್ರಕರಣ ಹೆಚ್ಚಾಗುತ್ತಿದ್ದು ಈಗಾಗಲೇ ಸುಮಾರು 5 ಲಕ್ಷಕ್ಕೂ ಅಧಿಕ ಕೋಳಿಗಳು,ಮೊಟ್ಟೆಗಳನ್ನು ನಾಶಪಡಿಸಲಾಗಿದೆ.
H5N1 ವೈರಸ್ ಪರಿಣಾಮ ಬಳ್ಳಾರಿ ಜಿಲ್ಲೆಯ ಕೋಳಿ ಸಾಕಣೆ ಕೇಂದ್ರಗಳಲ್ಲಿ (Poultry farms) ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, ಈ ಬೆಳವಣಿಗೆ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕುರಿತ ಆತಂಕ ಹೆಚ್ಚಾಗುವಂತೆ ಮಾಡಿದೆ.
ಹಕ್ಕಿ ಜ್ವರದ ಬೀತಿಯಿಂದ ರಾಜ್ಯದಲ್ಲಿ ಜನರು ಕಂಗಾಲಾಗಿದ್ದಾರೆ. ಚಿಕನ್ ಸೇವಿಸಬೇಕೊ ಇಲ್ಲವೊ ಎಂಬ ಗೊಂದಲ ಜನರಲ್ಲಿ ಎದುರಾಗಿದೆ.ರಾಯಚೂರು, ಚಿಕ್ಕಬಳ್ಳಾಪುರ ಮತ್ತು ಬಳ್ಳಾರಿಯ ಕೋಳಿಗಳಲ್ಲಿ ಹಕ್ಕಿ ಜ್ವರದ ಪ್ರಕರಣಗಳು ವರದಿಯಾಗಿರುವುದರಿಂದ, ಬೆಂಗಳೂರಿನಾದ್ಯಂತ ಕೋಳಿ ಮಾರಾಟ ಮತ್ತು ಬೆಲೆಗಳು ಕುಸಿದಿವೆ.

ಕರ್ನಾಟಕದಲ್ಲೂ (Karnataka) ಹೆಚ್5ಎನ್1 ವೈರಸ್ ಪ್ರಕರಣಗಳ ವರದಿಗಳು ಧೃಡಪಟ್ಟ ನಂತರ ಕೋಳಿ ಮಾರಾಟದಲ್ಲಿ ಭಾರಿ ಕುಸಿತ ಉಂಟಾಗಿದೆ.ಹಕ್ಕಿ ಜ್ವರ ಹರಡಿದ ನಂತರ ರೈತರು ಮತ್ತು ಕೋಳಿ ಕಂಪನಿಗಳು ಗಮನಾರ್ಹ ನಷ್ಟ ಅನುಭವಿಸಿವೆ.
ಇದನ್ನು ಓದಿ: ನೆರೆ ರಾಜ್ಯಗಳಲ್ಲಿ ಹಕ್ಕಿಜ್ವರ: ಕರ್ನಾಟಕದಲ್ಲಿ ಹೈ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ
ರಾಜ್ಯದಲ್ಲಿ ಹಕ್ಕಿಜ್ವರ ಹೆಚ್ಚಾಗುತ್ತಿರುವುದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ (State Govt) ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಗೆ ಮಾತ್ರ (take a break from eating chicken) ಅನ್ವಯವಾಗುವಂತೆ ಹೊಸ ಮಾರ್ಗಸೂಚಿ ಬಿಡುಗದೆ ಮಾಡಿದೆ.
ಆರೋಗ್ಯ ಇಲಾಖೆ (Department of Health) ಮಾರ್ಗಸೂಚಿಗಳು ಕೆಳಗಿನಂತಿವೆ;
- ಹಕ್ಕಿ ಜ್ವರ ಕಂಡುಬಂದ ಸ್ಥಳದ 3 ಕಿ.ಮೀ. ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ. ಈ ವ್ಯಾಪ್ತಿಯಲ್ಲಿ ಯಾರೂ ಓಡಾಡುವಂತಿಲ್ಲ.
- ಹಕ್ಕಿ ಜ್ವರ ಕಂಡು ಬಂದ 10 ಕಿಲೋ ಮೀಟರ್ ವ್ಯಾಪ್ತಿ ಸರ್ವಲೆನ್ಸ್ ಸ್ಥಳ (Surveillance) ಎಂದು ಘೋಷಣೆ. ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ.
- ಮಾಂಸ ಸಂಪೂರ್ಣವಾಗಿ ಬೇಯಿಸಿಯೇ ತಿನ್ನಬೇಕು. ಅರಬರೆ ಬೇಯಿಸಿದ ಮತ್ತು ಹಸಿ ಮಾಂಸ (Raw meat) ತಿನ್ನುವಂತಿಲ್ಲ.
- ಪೌಲ್ಟ್ರಿಯಲ್ಲಿ (poultry)ಕೆಲಸ ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕು. ಕೋಳಿ ಮಾಂಸ ಕತ್ತರಿಸುವಾಗ ಮಾಸ್ಕ್, ಗ್ಲೌಸ್ ಧರಿಸುವುದು ಕಡ್ಡಾಯ.
- ಹಕ್ಕಿಗಳು, ಕೋಳಿಗಳ ಜೊತೆ ಇರುವವರಿಗೆ ಔಷಧ (Medicine) ನೀಡಬೇಕು.
- ಹಕ್ಕಿ ಜ್ವರದ ಗುಣಲಕ್ಷಣ ಇರುವವರಿಗೆ RTPCR ಟೆಸ್ಟ್ (RTPCR Test) ಕಡ್ಡಾಯ. ಹಕ್ಕಿ ಜ್ವರ ಬಂದವರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ ತೆರೆಯಬೇಕು .
- ರೋಗ ಪತ್ತೆಯಾದ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಎಲ್ಲ ಕೋಳಿಗಳನ್ನು ಕೊಂದು ಹೂಳುವಂತೆ ತಿಳಿಸಿದೆ.