ತಮಿಳುನಾಡು ವಿಧಾನಸಭೆ ಚುನಾವಣೆ: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

ಚೆನ್ನೈ, ಮಾ. 16: ಏಪ್ರಿಲ್ ೬ರಂದು ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಚುನಾವನಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿದೆ. ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ಅಳಗಿರಿ ಇಂದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ಮುಚ್ಚಲಾಗುತ್ತದೆ, ಅಂತರ್ಜಾತಿ ಮದುವೆಗಳಿಗೆ ಪ್ರೋತ್ಸಾಹ, ಅಂತರ್ಜಾತಿ ವಿವಾಹಗಳಿಂದ ಉಂಟಾಗುವ ಮರ್ಯಾದಾ ಹತ್ಯೆಗಳನ್ನು ತಡೆಯಲು ವಿಶೇಷ ಕಾನೂನು ರಚಿಸಲಾಗುವುದು ಎಂದು ಭರವಸೆ ನೀಡಿದೆ. ತಮಿಳುನಾಡು ಮತದಾರರ ಮನೋಭಾವವನ್ನು ಮುಖ್ಯವಾಗಿ ಗುರಿಯಾಗಿ ಇರಿಸಿಕೊಂಡು ಚುನಾವಣಾ ಪ್ರಣಾಳಿಕೆಯನ್ನು ರೂಪಿಸಲಾಗಿದೆ.

ಇಷ್ಟೇ ಅಲ್ಲದೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇನ್ನಷ್ಟು ಆಕರ್ಷಕ ಅಂಶಗಳಿವೆ. ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ 500 ಯುವಕ/ಯುವತಿಯರಿಗೆ ಸರ್ಕಾರ ಉದ್ಯೋಗ ಪಡೆಯಲು ಅಗತ್ಯವಿರುವ ತರಬೇತಿ ಒದಗಿಸುತ್ತೇವೆ. ಜತೆಗೆ, ಯುವಜನರಿಗೆ ಉದ್ಯೋಗ ಪಡೆಯಲು ಅಗತ್ಯವಿರುವ ಹಲವು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಸಹ ಕಾಂಗ್ರೆಸ್ ಘೋಷಿಸಿದೆ. ಭವಿಷ್ಯದಲ್ಲಿ ಹೆಚ್ಚು ಮುನ್ನೆಲೆಗೆ ಬರುವ ಸಾಧ್ಯತೆಯಿರುವ ನವೋದ್ಯಮಗಳಿಗೆ ಬಲ ತುಂಬುವ ಕುರಿತೂ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ.

Exit mobile version