ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ :ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ, ಮೇ. 26: ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕೋರಿ ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಮತ್ತು ಅದಕ್ಕೆ ಅಗತ್ಯವಾದ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸುವುದಾಗಿ ಡಿಎಂಕೆ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.

ಈ ಹಿಂದೆ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳಾದ ಪಂಜಾಬ್, ರಾಜಸ್ಥಾನ, ಛತ್ತೀಸಗಡ, ದೆಹಲಿ, ಕೇರಳ ಮತ್ತು ಪಶ್ಚಿಮ ಬಂಗಾಳ ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಈ ಕಾನೂನುಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಿವೆ.

ಇಂದು ಕರಾಳ ದಿನ:
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ರೈತರ ಚಳವಳಿ ಆರು ತಿಂಗಳು ಪೂರ್ಣಗೊಂಡಿದ್ದನ್ನು ಗುರುತಿಸಲು ರೈತ ಸಂಘಗಳು ಮೇ 26 ಅನ್ನು ‘ಕರಾಳದಿನ’ ಎಂದು ಆಚರಿಸುತ್ತಿವೆ. ರೈತರು ತಮ್ಮ ಮನೆ, ವಾಹನಗಳು ಮತ್ತು ಇತರ ಸ್ಥಳಗಳಿಂದ ಕಪ್ಪು ಧ್ವಜಗಳನ್ನು ಹಾರಿಸುವುದರ ಜೊತೆಗೆ ಕಪ್ಪು ಟರ್ಬನ್ ಮತ್ತು ಕಪ್ಪು ದುಪಟ್ಟಾ ಧರಿಸಿ ಕಪ್ಪು ದಿನವನ್ನು ಆಚರಿಸುತ್ತಿದ್ದಾರೆ.

Exit mobile version