ಮೇಕೆದಾಟು ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ತಮಿಳುನಾಡು

ನವದೆಹಲಿ ಆ 27 : ಮೇಕೆದಾಟು ಡ್ಯಾಂ ನಿರ್ಮಿಸುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಈಗಾಗಲೇ ಕರ್ನಾಟಕ ಜಲ ಸಂಪನ್ಮೂಲ ಆಯೋಗಕ್ಕೆ ಸಲ್ಲಿಸಿರುವ ವರದಿಯನ್ನು ರದ್ದುಪಡಿಸಲು ತಮಿಳುನಾಡು ತನ್ನ ಅರ್ಜಿಯಲ್ಲಿ ಕೋರಿದೆ.

ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಳೆದ ಕೆಲವು ತಿಂಗಳಿನಿಂದ ‘ಹೇಳಿಕೆ’ಗಳ ಸಮರ ನಡೆಯುತ್ತಿದೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಜತೆಗೆ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಿಯೇ ಸಿದ್ಧ ಎಂದು ಅವರು ಭರವಸೆಯನ್ನು ಸಹ ನೀಡಿದ್ದರು.

Exit mobile version