ಪ್ರೀತಿಯನ್ನು ತಿರಸ್ಕರಿಸಿದ್ದಕ್ಕಾಗಿ ಪ್ರಥಮ ಪಿಯು ಯುವತಿಗೆ 14 ಬಾರಿ ಇರಿದ ಆರೋಪಿ ಶವವಾಗಿ ಪತ್ತೆ!

Stabbed

ತಮಿಳುನಾಡಿನ(Tamilnadu) ತಿರುಚ್ಚಿಯಲ್ಲಿ(Tiruchi) 16 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದೇ ನಿರಾಕರಿಸಿದಳು ಎಂಬ ಕಾರಣಕ್ಕಾಗಿ 22 ವರ್ಷದ ಯುವಕ, ಯುವತಿಗೆ 14 ಬಾರಿ ಚಾಕುವಿನಿಂದ ಇರಿದಿದ್ದಾನೆ.

ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಪತ್ತೆಹಚ್ಚುತ್ತಿದ್ದಾರೆ ಎಂದು ವರದಿ ತಿಳಿಸಿತ್ತು. ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ಯುವತಿ ಪ್ರಥಮ ಪಿಯುಸಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ, ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ಆಕೆಯನ್ನು ತಡೆದಿದ್ದಾನೆ.

ಕೇಶವನ್ ಬಾಲಕಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಜೂನ್ 2021 ರಲ್ಲಿ ಅದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು ಎಂದು ಸಂತ್ರಸ್ತೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದನ್ನು.

ಚಾಕು ಇರಿದು ಸಾಯಿಸುವ ದಿನದಂದು ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿದ್ದಾನೆ. ಈ ವಿಷಯಕ್ಕೆ ಯುವತಿ ನಿರಾಕರಿಸಿದ ಪರಿಣಾಮ, ಆಕೆ ಕೂಗಿ ಜನ ಸೇರಿಸುತ್ತಾಳೆ ಎಂಬ ಭಯದಿಂದ 14 ಬಾರಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಾಲಕಿ ಕೆಳಗೆ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಕೆಯ ದೇಹದಿಂದ ರಕ್ತ ಹರಿಯುತ್ತಿರುವುದನ್ನು ಗಮನಿಸಿ ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ಆರೋಪಿಯನ್ನು ತಿರುಚ್ಚಿಯ ಪೋತಮೆಟ್ಟುಪಟ್ಟಿ ನಿವಾಸಿ ಕೇಶವನ್ ಎಂದು ಗುರುತಿಸಿರುವ ಪೊಲೀಸರು, ಆತನಿಗಾಗಿ ಶೋಧ ನಡೆಸಿದ್ದಾರೆ. ಈ ಘಟನೆ ಕುರಿತು ಟ್ವೀಟ್ ಮಾಡಿರುವ ಕರೂರಿನ ಕಾಂಗ್ರೆಸ್ ಸಂಸದೆ ಜೋತಿಮಣಿ, ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ 14 ಬಾರಿ ಇರಿದಿರುವ ಸುದ್ದಿ ಕೇಳಿ ಆಘಾತವಾಯಿತು. ಕೇಶವನ್‌ನನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು. ಇಂತಹ ದುಷ್ಕೃತ್ಯಗಳು ಸಂಭವಿಸಿದಾಗಲೆಲ್ಲಾ ನಾವು ಅಸಮಾಧಾನಗೊಳ್ಳುತ್ತೇವೆ.

ಕಠಿಣ ಶಿಕ್ಷೆಯ ಜೊತೆಗೆ ಶಿಕ್ಷಣದ ಮೂಲಕ ಸಮಾಜದಲ್ಲಿ ಇಂತಹ ಅತಿರೇಕದ ಮನಸ್ಥಿತಿಯನ್ನು ಬದಲಾಯಿಸಬೇಕು ಎಂದು ಜೋತಿಮಣಿ ಟ್ವೀಟ್ ಮಾಡಿದ್ದಾರೆ. ತನ್ನ ಪ್ರೇಮ ಪ್ರಸ್ತಾಪವನ್ನು ಒಪ್ಪದ ಯುವತಿಗೆ ಕೇಶವನ್ 14 ಬಾರಿ ಚಾಕುವಿನಿಂದ ಇರಿದಿದ್ದಾನೆ. ಆತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಮೂರು ವಿಶೇಷ ತಂಡಗಳು ಶೋಧ ನಡೆಸುತ್ತಿವೆ. ಆದ್ರೆ, ಮಂಗಳವಾರ ತಡರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ಕೇಶವನ್ ಎಂದು ಗುರುತಿಸಲಾದ ಆರೋಪಿಯನ್ನು ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿದಾಗ, ಮನಪ್ಪರೈ ಬಳಿಯ ರೈಲ್ವೆ ಹಳಿಗಳ ಮೇಲೆ ಶವವಿರುವ ಬಗ್ಗೆ ಅವರಿಗೆ ಮಾಹಿತಿ ದೊರೆತಿದೆ.

ಪೊಲೀಸರು ಶವದ ಬಳಿ ಸೆಲ್‌ಫೋನ್ ಅನ್ನು ಪಡೆದುಕೊಂಡು, ಕೇಶವನ್ ಅವರ ತಂದೆಗೆ ಕರೆ ಮಾಡಿದ್ದಾರೆ. ಅವರ ತಂದೆ ಬಂದು ಶವವನ್ನು ಗುರುತಿಸಿದ್ದಾರೆ ಎನ್ನಲಾಗಿದೆ.

Exit mobile version