ತಮಿಳುನಾಡಿನ(Tamilnadu) ಚೆಂಗಲ್ಪಟ್ಟು(Chengalpattu) ಜಿಲ್ಲೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ವಿದ್ಯಾರ್ಥಿಗಳು ಮದ್ಯ(Alcohal) ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ(Social Media) ಭಾರಿ ವೈರಲ್(Viral) ಆಗಿದೆ. ಹೌದು, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಆಗಿರುವ ಈ ವೀಡಿಯೋ ಬಸ್ ನಲ್ಲಿದ್ದ ಮತ್ತೊರ್ವ ವಿದ್ಯಾರ್ಥಿಯೊಬ್ಬರು ರೆಕಾರ್ಡ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ಇದು ಹುಡುಗಿಯರು ಮತ್ತು ಹುಡುಗರ ಗುಂಪು ಬಿಯರ್ ಬಾಟಲಿಯನ್ನು ಕೈಗೆತ್ತಿಕೊಂಡು ಸೇವಿಸುವುದನ್ನು ತೋರಿಸುತ್ತದೆ. ಎಲ್ಲಾ ವಿದ್ಯಾರ್ಥಿಗಳು ಚೆಂಗಲ್ಪಟ್ಟುವಿನ ಸರ್ಕಾರಿ ಶಾಲೆಯವರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಆರಂಭದಲ್ಲಿ ಇದು ಹಳೆಯ ವಿಡಿಯೋ ಎಂದು ಹೇಳಲಾಗಿತ್ತು. ಆದ್ರೆ ಈ ಘಟನೆ ಮಂಗಳವಾರ ನಡೆದಿರುವುದು ಸಾಬೀತಾಗಿರುವುದು ತಿಳಿದುಬಂದಿದೆ.
ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ತಿರುಕಝುಕುಂದ್ರಂನಿಂದ ತಾಚೂರ್‌ಗೆ ಬಸ್‌ನಲ್ಲಿ ಪ್ರಯಾಣಿಸದ್ದರು. ಈ ಘಟನೆಯನ್ನು ಶಾಲಾ ಆಡಳಿತದವರು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.