Tamilnadu: ತಮಿಳು ನಟ ದಳಪತಿ ವಿಜಯ್ ಅವರು, ರಾಜಕೀಯ ಪ್ರವೇಶಿಸಿದ್ದು, ತಮ್ಮ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ (Tamil Vetri Association) ಎಂದು ನಾಮಕರಣ ಮಾಡಿದ್ದಾರೆ. ನಟ ವಿಜಯ್ (Actor Vijay) ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಳಪತಿ ವಿಜಯ್ ಅವರು ರಾಜಕೀಯಕ್ಕೆ ಬರುವುದಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದು, ಇದು ತಮಿಳುನಾಡಿನ (Tamilnadu) ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ತರಲಿದೆ ಎಂದು ಭಾವಿಸಲಾಗಿದೆ. ಇನ್ನು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ.
ನಟ ವಿಜಯ್ ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
2024ರ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.
ಭವ್ಯಶ್ರೀ ಆರ್ ಜೆ