vijaya times advertisements
Visit Channel

ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ತೆಗೆದು ಹಾಕುವಂತಿಲ್ಲ ಟಾಟಾಗೆ ಸರ್ಕಾರ ಸೂಚನೆ

ನವದೆಹಲಿ ಅ 9 : ಏರ್ ಇಂಡಿಯಾ ಬಿಡ್ಡಿಂಗ್ ನಲ್ಲಿ ಗೆದ್ದು ಸಂಸ್ಥೆಯನ್ನು ತನ್ನದಾಗಿಸಿಕೊಂಡಿರುವ ಟಾಟಾ ಗ್ರೂಪ್ ಕನಿಷ್ಠ ಒಂದು ವರ್ಷದವರೆಗೆ ನೌಕರರನ್ನು ಉಳಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಹೇಳಿದೆ. ಈಗಿರುವ ಏರ್ ಇಂಡಿಯಾ ನೌಕರರ ಹಿತಾಸಕ್ತಿಗಳನ್ನು ಕಾಪಾಡಲಾಗುತ್ತಿದ್ದು, ಒಂದು ವರ್ಷ ನಂತರ ಸಂಸ್ಥೆ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ವಿಆರ್ ಎಸ್ ಸೌಲಭ್ಯವನ್ನು ನೀಡಬೇಕೆಂದು ಸರ್ಕಾರ ತಾಕೀತು ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದ ವಿಮಾನಯಾನ ಸಚಿವಾಲಯ ಕಾರ್ಯದರ್ಶಿ ರಾಜೀವ್ ಬನ್ಸಲ್, ಈಗಿರುವ ಎಲ್ಲಾ ನೌಕರರ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು. ನಮ್ಮ ಬಿಡ್ಡಿಂಗ್ ನಲ್ಲಿ ಗೆದ್ದಿರುವ ಟಾಟಾ ಗ್ರೂಪ್ ನೌಕರರನ್ನು ಕಂಪೆನಿಯಲ್ಲಿ ಉಳಿಸಿಕೊಳ್ಳಬೇಕು. ಅದರರ್ಥ ಒಂದು ವರ್ಷದವರೆಗೆ ಕೆಲಸದಿಂದ ತೆಗೆದುಹಾಕುವಂತಿಲ್ಲ. ಒಂದು ವರ್ಷ ಬಳಿಕ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ಅವರಿಗೆ ಸ್ವಯಂ ನಿವೃತ್ತಿ ಯೋಜನೆಯ ಸೌಲಭ್ಯವನ್ನು ನೀಡಬೇಕು ಎಂದು ಸರ್ಕಾರ ನಿಯಮ ತಂದಿದೆ ಎಂದರು.

ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ ಬಿಡ್ಡಿಂಗ್ ನಲ್ಲಿ ಟಾಟಾ ಸನ್ಸ್ 18 ಸಾವಿರ ಕೋಟಿ ರೂಪಾಯಿಗೆ ಗೆದ್ದು ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು ದಿವಾಳಿಯ ಹಂತಕ್ಕೆ ತಲುಪಿರುವ ಏರ್ ಇಂಡಿಯಾದ ವೈಭವವನ್ನು ಮರು ನಿರ್ಮಾಣ ಮಾಡಲು ಮುಂದಾಗಲಿದೆ. ದೇಶದ ಕಾನೂನಿನ ಪ್ರಕಾರ ಉದ್ಯೋಗಿಗಳಿಗೆ ಗ್ರಾಚ್ಯುಟಿ ಮತ್ತು ಭವಿಷ್ಯ ನಿಧಿ ಪ್ರಯೋಜನಗಳನ್ನು ಒದಗಿಸಲಾಗುವುದು. ನಿವೃತ್ತಿ ಹೊಂದಿದ ಅಥವಾ ನಿವೃತ್ತರಾದವರಿಗೆ ನಿವೃತ್ತಿ ನಂತರದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಬನ್ಸಲ್ ತಿಳಿಸಿದ್ದಾರೆ.

ಏರ್ ಇಂಡಿಯಾದಲ್ಲಿ ಒಟ್ಟು 8 ಸಾವಿರದ 084 ಖಾಯಂ ಮತ್ತು 4 ಸಾವಿರ 001 ಗುತ್ತಿಗೆ ಸಿಬ್ಬಂದಿಯನ್ನು ಒಳಗೊಂಡು ಒಟ್ಟು 12 ಸಾವಿರದ 085 ಉದ್ಯೋಗಿಗಳಿದ್ದಾರೆ. ಅದರ ಅಂಗಸಂಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್  ಸಾವಿರದ 434 ಉದ್ಯೋಗಿಗಳನ್ನು ಹೊಂದಿದೆ. ಮುಂದಿನ ಐದು ವರ್ಷಗಳಲ್ಲಿ ಸುಮಾರು 5 ಸಾವಿರ ಉದ್ಯೋಗಿಗಳು ಸಂಸ್ಥೆಯಿಂದ ನಿವೃತ್ತರಾಗಲಿದ್ದಾರೆ. ನಿವೃತ್ತ ನೌಕರರು ನಿಯಮಗಳ ಪ್ರಕಾರ ವೈದ್ಯಕೀಯ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸುತ್ತಾರೆ. ಸುಮಾರು 55 ಸಾವಿರ ನಿವೃತ್ತ ಸಿಬ್ಬಂದಿ ಏರ್ ಇಂಡಿಯಾದೊಂದಿಗೆ ಸಂಬಂಧ ಹೊಂದಿದ್ದಾರೆ.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.