ಸೆ 5ರಿಂದ ಸೆ 17ರ ವರೆಗೂ ಶಿಕ್ಷಕರ ಪರ್ವ

ನವದೆಹಲಿ ಸೆ 3 : ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಿಂದ ಸೆ 17ರ ವರೆಗೂ  ಶಿಕ್ಷಕ್ ಪರ್ವ್-2021 ಆರಂಭಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ.

ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯದ ಶಿಕ್ಷಣ ಇಲಾಖೆ ಮತ್ತು ಸಾಕ್ಷರತೆಯ ಹೆಚ್ಚುವರಿ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ ಅವರು ಮಾತನಾಡಿ, ಶಿಕ್ಷಕರ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ -2020ರ ಅಡಿಯಲ್ಲಿ  ಶಿಕ್ಷಕ ಪರ್ವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಶಿಕ್ಷಕರಿಗೆ ಲಸಿಕೆ ಹಾಕುವ ಅಭಿಯಾನವನ್ನು ಎಲ್ಲಾ ರಾಜ್ಯಗಳಲ್ಲೂ ನಡೆಸಲಾಗುತ್ತಿದ್ದು , ರಾಜ್ಯಗಳಲ್ಲಿ ಲಸಿಕೆಯ ಪ್ರಗತಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಾಗೂ ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಕರಿಗೆ ಲಸಿಕೆ ನೀಡುವುದು ಅವಶ್ಯಕ ಎಂದು ಅವರು ಹೇಳಿದ್ದಾರೆ.

ಶಿಕ್ಷಕರ ದಿನದಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 44  ಶಿಕ್ಷಕರಿಗೆ ಪ್ರಶಸ್ತಿಗಳನ್ನು ನೀಡಲಿದ್ದಾರೆ ಎಂದು ಮಾಹಿತಿ ಅವರು ತಿಳಿಸಿದರು. ಪ್ರಶಸ್ತಿ ಪಡೆದ ಪ್ರತಿ ಶಿಕ್ಷಕರ ಕುರಿತ ಸಾಕ್ಷ್ಯಚಿತ್ರವನ್ನು ಸಹ ಪ್ರದರ್ಶಿಸಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರ ಶ್ರೇಷ್ಠತೆ ಮತ್ತು ಬದ್ಧತೆಯನ್ನು ಗುರುತಿಸಲು 1958 ರಿಂದ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಲು ಪ್ರಾರಂಭಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ ಮಾಡುವ ಅರ್ಹ ಶಿಕ್ಷಕರಿಗೆ ಸಾರ್ವಜನಿಕ ಮನ್ನಣೆ ನೀಡುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.  

Exit mobile version