English English Kannada Kannada

ಟಿ20 ವಿಶ್ವಕಪ್‌ಗೆ ಬಲಿಷ್ಠ ಭಾರತ ತಂಡ ಪ್ರಕಟ

15 ಆಟಗಾರರ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ಜೊತೆಗೆ 3 ಮೀಸಲು ಆಟಗಾರರನ್ನು ಕೂಡ ಪ್ರಕಟಿಸಿದೆ. ಈ ಬಾರಿಯ ಟಿ20 ವಿಶ್ವಕಪ್‌ ತಂಡದಿಂದ ಶಿಖರ್ ಧವನ್‌ ಮತ್ತು ಯಜುವೇಂದ್ರ ಚಹಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
Share on facebook
Share on google
Share on twitter
Share on linkedin
Share on print

ಮುಂಬೈ ಸೆ 9 : ಮುಂಬರುವ ಟಿ20 ವಿಶ್ವಕಪ್‌ಗೆ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಹಲವು ವರ್ಷಗಳಿಂದ ಟಿ 20ಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಆರ್‌. ಅಶ್ವಿನ್‌ ಈ ಬಾರಿಯ ಚುಟುಕು ವಿಶ್ವಕಪ್‌ಗೆ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾರೆ.

15 ಆಟಗಾರರ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ಜೊತೆಗೆ 3 ಮೀಸಲು ಆಟಗಾರರನ್ನು ಕೂಡ ಪ್ರಕಟಿಸಿದೆ. ಈ ಬಾರಿಯ ಟಿ20 ವಿಶ್ವಕಪ್‌ ತಂಡದಿಂದ ಶಿಖರ್ ಧವನ್‌ ಮತ್ತು ಯಜುವೇಂದ್ರ ಚಹಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಚುಟುಕು ಕ್ರಿಕೆಟ್‌ಗೆ ಈಗಾಗಲೇ ವೇಳಾಪಟ್ಟಿ ಪ್ರಕಟಗೊಂಡಿದ್ದು, ಈ ಬಾರಿಯ ಟಿ20 ವಿಶ್ವಕಪ್​ ಪಂದ್ಯಾವಳಿಗಳು ಅಕ್ಟೋಬರ್ 17 ರಿಂದ ಪ್ರಾರಂಭವಾಗಲಿದ್ದು, ನವೆಂಬರ್ 14 ರ ವರೆಗೆ ಯಎಇ ಮತ್ತು ಓಮನ್‌ನಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್‌ಗೆ ಬಿಸಿಸಿಐ ಪ್ರಕಟಿಸಿರುವ ಭಾರತ ತಂಡ ಇಂತಿದೆ.   

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬೂಮ್ರಾ , ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್

ಈ ವಿಶ್ವಕಪ್‌ಗೆ ಭಾರತ ತಂಡದ ಮೆಂಟರ್‌ ಆಗಿ ಭಾರತ ತಂಡದ ಮಾಜಿ ನಾಯಕ ಎಂ.ಎಸ್‌. ಧೋನಿ ಕಾರ್ಯ ನಿರ್ವಹಿಸಲಿದ್ದಾರೆ.

Submit Your Article