ಟಿ20 ನಾಯಕತ್ವಕ್ಕೆ ವಿರಾಟ್ ಗುಡ್ ಬೈ

ಮುಂಬೈ ಸೆ 16 : ಭಾರತ ತಂಡದ ನಾಯಕ  ವಿರಾಟ್ ಕೊಹ್ಲಿ ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಬಳಿಕ ಟಿ20 ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಮೂರು ಮಾದರಿಗೂ ಒಬ್ಬನೇ ನಾಯಕ ಬೇಡ ಎಂಬ ಮಾತು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಈಗ ಕೊಹ್ಲಿ ಟಿ20 ನಾಯಕತ್ವ ಬಿಟ್ಟು ಕೊಡಲು ನಿರ್ಧಾರ ಮಾಡಿದ್ದಾರೆ. ಟಿ20 ವಿಶ್ವಕಪ್‌ ಬಳಿಕ ಕೊಹ್ಲಿ ಟಿ20 ನಾಯಕತ್ವ ತ್ಯಜಿಸಲಿದ್ದು ರೋಹಿತ್ ಶರ್ಮಾ ಮುಂದಿನ ನಾಯಕನಾಗುವ ಸಾಧ್ಯತೆಯಿದೆ.

ಕೆಲ ದಿನಗಳ ಹಿಂದಷ್ಟೇ ಭಾರತೀಯ ವೈಟ್‌ಬಾಲ್‌ ಕ್ರಿಕೆಟ್‌ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ವಿರಾಟ್ ಕೊಹ್ಲಿಗೆ ಬದಲಾಗಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆ ಮಾತುಗಳು ಟಿ20 ವಿಶ್ವಕಪ್‌ ಬಳಿಕ ನಿಜವಾಗಲಿದೆ

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ 5-6 ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿದ್ದೇನೆ ಆದರೆ ಟೆಸ್ಟ್‌ ನಾಯಕತ್ವಕ್ಕೆ ಹೆಚ್ಚಿನ ಒತ್ತು ಕೊಡಬೇಕಾಗಿರುವುದರಿಂದ ಟಿ20 ನಾಯಕತ್ವದಿಂದ ಮುಕ್ತನಾಗಲು ಬಯಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Exit mobile version