ಇಸ್ರೇಲ್–ಲೆಬನಾನ್ ಸಂಘರ್ಷದಲ್ಲಿ(temporary break between Israel and Lebanon) ಮಹತ್ವದ ತಿರುವು
ಅಮೆರಿಕದ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿದ ಎರಡು ರಾಷ್ಟ್ರಗಳು
ಟ್ರಂಪ್ ಮಾತುಕತೆಯಿಂದ ಇಸ್ರೇಲ್–ಲೆಬನಾನ್ ನಡುವೆ 10 ದಿನಗಳ ವಿರಾಮ ಘೋಷಣೆ
Beirut : ಮಧ್ಯಪ್ರಾಚ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರವಾಗಿ ಉಲ್ಬಣಗೊಂಡಿದ್ದ (temporary break between Israel and Lebanon) ಇಸ್ರೇಲ್ ಮತ್ತು ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ.
ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಹತ್ವದ ಮಾತುಕತೆಗಳ ಫಲವಾಗಿ, ಎರಡು ರಾಷ್ಟ್ರಗಳು 10 ದಿನಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ.
ಈ ನಿರ್ಧಾರವು ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ತಗ್ಗಿಸುವ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

ಕದನ ವಿರಾಮ ಘೋಷಣೆಯ ನಂತರ ಜನರಲ್ಲಿ ಸ್ವಲ್ಪ ಮಟ್ಟಿನ ನೆಮ್ಮದಿ (temporary break between Israel and Lebanon) ಮೂಡಿದರೂ, ಪರಿಸ್ಥಿತಿ ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ .
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಈ ಕುರಿತು ಮಾಹಿತಿ ನೀಡಿದ್ದು, ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ (Joseph Aun) ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆದ ಮಾತುಕತೆ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ಅವರ ಪ್ರಕಾರ, ಲೆಬನಾನ್ ಸ್ಥಳೀಯ ಸಮಯ ರಾತ್ರಿ 12 ಗಂಟೆಯಿಂದ ಈ 10 ದಿನಗಳ ಕದನ ವಿರಾಮ ಜಾರಿಯಾಗಲಿದೆ. ಈ ಅವಧಿಯಲ್ಲಿ ಶಾಶ್ವತ ಶಾಂತಿ ಸ್ಥಾಪನೆಗಾಗಿ ಮುಂದಿನ ಹಂತದ ಮಾತುಕತೆಗಳನ್ನು ನಡೆಸುವ ಉದ್ದೇಶವಿದೆ.
ಟ್ರಂಪ್ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, ಜಾಗತಿಕ ಮಟ್ಟದಲ್ಲಿ ಹಲವು ಸಂಘರ್ಷಗಳನ್ನು ಕಡಿಮೆ ಮಾಡಲು ತಾವು ಕೈಗೊಂಡ ಪ್ರಯತ್ನಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಈ ಬೆಳವಣಿಗೆಗೆ ಮತ್ತೊಂದು ಪ್ರಮುಖ ಕಾರಣವೆಂದರೆ, 34 ವರ್ಷಗಳ ಬಳಿಕ ಲೆಬನಾನ್ ಮತ್ತು ಇಸ್ರೇಲ್ ಪ್ರತಿನಿಧಿಗಳು ಅಮೆರಿಕದ ವಾಷಿಂಗ್ಟನ್ ಡಿ.ಸಿ.ಯಲ್ಲಿ ಮುಖಾಮುಖಿ ಮಾತುಕತೆ ನಡೆಸಿರುವುದು.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹಾಗೂ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಉಪಸ್ಥಿತಿಯಲ್ಲಿ ನಡೆದ ಈ ಚರ್ಚೆಗಳು ರಾಜತಾಂತ್ರಿಕವಾಗಿ ಮಹತ್ವ ಪಡೆದಿವೆ.
ಈ ಸಂದರ್ಭದಲ್ಲಿ ಶಾಶ್ವತ ಕದನ ವಿರಾಮದ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಯಿತು. ಮಧ್ಯಪ್ರಾಚ್ಯದಲ್ಲಿ ಶಾಂತಿ ಕಾಪಾಡಲು ಅಮೆರಿಕ ಪ್ರಮುಖ ಪಾತ್ರವಹಿಸುತ್ತಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ.
ಆದರೆ ಒಂದೆಡೆ ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ, ಮತ್ತೊಂದೆಡೆ ಇರಾನ್ ವಿರುದ್ಧ ಅಮೆರಿಕ ಗಂಭೀರ ಎಚ್ಚರಿಕೆ ನೀಡಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.
ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರು, ಅಗತ್ಯವಿದ್ದರೆ ಸೇನೆ ತಕ್ಷಣ ಕಾರ್ಯಾಚರಣೆ ಆರಂಭಿಸಲು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಇರಾನ್ ಒಪ್ಪಂದಕ್ಕೆ ಬಾರದಿದ್ದರೆ ಪರಿಸ್ಥಿತಿ ಕ್ಷಣಾರ್ಧದಲ್ಲಿ ಬದಲಾಗಬಹುದು ಎಂಬ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.
ಈ ನಡುವೆ ಇರಾನ್ ಬಂದರುಗಳ ಮೇಲೆ ವಿಧಿಸಿದ ನಿರ್ಬಂಧಗಳ ಪರಿಣಾಮವಾಗಿ ಸಮುದ್ರ ಸಂಚಾರದಲ್ಲೂ ವ್ಯತ್ಯಾಸ ಉಂಟಾಗಿದೆ.
ಕಳೆದ 72 ಗಂಟೆಗಳಲ್ಲಿ ಹಲವು ಹಡಗುಗಳು ತಮ್ಮ ಮಾರ್ಗಗಳನ್ನು ಬದಲಾಯಿಸಿರುವುದು ಈ ಉದ್ವಿಗ್ನತೆಯ ಗಂಭೀರತೆಯನ್ನು ತೋರಿಸುತ್ತದೆ.
ಇದರ ಜೊತೆಗೆ, ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ ಕುರಿತು ನರೇಂದ್ರ ಮೋದಿ (Narendra Modi )ಹಾಗೂ ಇಮ್ಯಾನ್ಯುಯಲ್ ಮ್ಯಾಕ್ರಾನ್ (Emmanuel Macron) ದೂರವಾಣಿ ಮೂಲಕ
ಚರ್ಚೆ ನಡೆಸಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಹಾಗೂ ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಉಭಯ ನಾಯಕರು ಒತ್ತಿಹೇಳಿದ್ದಾರೆ.
ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಅಂತಾರಾಷ್ಟ್ರೀಯ ಸಹಕಾರ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇಸ್ರೇಲ್-ಲೆಬನಾನ್ ಕದನ ವಿರಾಮದ ಹಿನ್ನೆಲೆ, ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಹಂತದ ಮಾತುಕತೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ ಎಂಬ ಸೂಚನೆಗಳು ದೊರಕುತ್ತಿವೆ.
ಈ ಬೆಳವಣಿಗೆಗಳು ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಹೊಸ ನಿರೀಕ್ಷೆಯನ್ನು ಹುಟ್ಟಿಸಿದ್ದರೂ, ಮುಂದಿನ ದಿನಗಳಲ್ಲಿ ನಡೆಯುವ ರಾಜತಾಂತ್ರಿಕ ಕ್ರಮಗಳು
ಅತ್ಯಂತ ಮಹತ್ವದ್ದಾಗಿವೆ. ತಾತ್ಕಾಲಿಕ ಕದನ ವಿರಾಮವು ಶಾಶ್ವತ ಶಾಂತಿಗೆ ಮಾರ್ಗವಾಗುತ್ತದೆಯೇ ಎಂಬುದನ್ನು ಸಮಯವೇ ನಿರ್ಧರಿಸಬೇಕಿದೆ.