ತಮಿಳುನಾಡಿನ ದಿಂಡಿಗಲ್‌ನ (Dindigal, Tamil Nadu) ಖಾಸಗಿ ಆಸ್ಪತ್ರೆಯೊಂದರಲ್ಲಿ (Private hospital) ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ ಕನಿಷ್ಠ 6 ಜನ ಮೃತಪಟ್ಟಿದ್ದಾರೆ.ತಿರುಚ್ಚಿ ರಸ್ತೆಯಲ್ಲಿರುವ (Trichy Road) ಸಿಟಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿದ್ದವರ (Caught in Fire) ಪೈಕಿ 6 ಮಂದಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. 32 ಜನರನ್ನು ರಕ್ಷಿಸಲಾಗಿದ್ದು, ಡಿಂಡಿಗಲ್‌ನ ಸರ್ಕಾರಿ ಆಸ್ಪತ್ರೆಗೆ (Government Hospital Dindigul) ರವಾನಿಸಲಾಗಿದೆ ಎಂದು ಪೊಲೀಸ್ ಮತ್ತು ಅಗ್ನಿಶಾಮಕ ದಳದ ಮೂಲಗಳು ತಿಳಿಸಿವೆ.
ಈಗಾಗಲೇ 6 ಮಂದಿ ಮೃ*ಪಟ್ಟ ಬಗ್ಗೆ ಅಗ್ನಿಶಾಮಕ (Firefighter about to die) ಮೂಲಗಳು ದೃಢಪಡಿಸಿವೆ. ಆದಾಗ್ಯೂ ಜಿಲ್ಲಾಧಿಕಾರಿ ಎಂ.ಎನ್ ಪೂಂಗೋಡಿ (MN Poongodi) ಸಾ*ನೋವುಗಳ ಬಗ್ಗೆ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.ರಾತ್ರಿ 9ರ ಸುಮಾರಿಗೆ ಆಸ್ಪತ್ರೆಯ (Hospital) ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಮೂರನೇ ಮಹಡಿಗೂ ವ್ಯಾಪಿಸಿದೆ. ಸುಮಾರು ಒಂದು ಗಂಟೆ ಕಾಲ ದಟ್ಟ ಹೊಗೆ (Thick smoke) ಆವರಿಸಿತ್ತು. 32 ಜನರನ್ನು ರಕ್ಷಿಸಿ ಸರ್ಕಾರಿ ಆಸ್ಪತ್ರೆಗೆ (Govt hospital) ದಾಖಲಿಸಿದ್ದೇವೆ. ಆಸ್ಪತ್ರೆಯ ಲಿಫ್ಟ್‌ನಲ್ಲಿ ಕೆಲವರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ (Defense work) ನಡೆಯುತ್ತಿದೆ ಎಂದು ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿಯೊಬ್ಬರು ಹೇಳಿದ್ದಾರೆ.
ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (Chief Minister M.K. Stalin) ಮೃತರ ಸಂಬಂಧಿಕರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ . ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ (CMPRF) ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ, ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ ₹1 ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ ₹50,000 ನೆರವು ನೀಡುವುದಾಗಿ ಹೇಳಿದ್ದಾರೆ.ಅಲ್ಲದೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆಯೂ ಸಿಎಂ ನಿರ್ದೇಶನ ನೀಡಿದ್ದಾರೆ.