ಜಮ್ಮು-ಕಾಶ್ಮೀರದ ಸೇನಾ ಚೆಕ್ ಪೋಸ್ಟ್ ಮೇಲೆ ಉಗ್ರರ ದಾಳಿ: 6 ಜನ ಭದ್ರತಾ ಸಿಬ್ಬಂದಿಗೆ ಗಾಯ

Jammu – Kashmir: ಭಾನುವಾರವಷ್ಟೇ ಶಿವಕೋರಿ (Shivkori) ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಿಕರಿದ್ದ ಬಸ್ ಮೇಲೆ ರೀಸಿಯಲ್ಲಿ ನಡೆದ ಭೀಕರ ಉಗ್ರರ ದಾಳಿ (Terrorist Attack)ಯ ಆಘಾತ ಇನ್ನೂ ಹಸಿಯಾಗಿರುವಾಗಲೇ ಮತ್ತೆ ನಿನ್ನೆ ರಾತ್ರಿ ಜಮ್ಮು ಮತ್ತು ಕಾಶ್ಮೀರದ (Jammu And Kashmir) ದೋಡಾದಲ್ಲಿ ಭಯೋತ್ಪಾದಕರು ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದಾರೆ. ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಈ ಘಟನೆಯಲ್ಲಿ ಉಗ್ರರ ದಾಳಿಯಲ್ಲಿ ಐವರು ಯೋಧರು ಹಾಗೂ ಒಬ್ಬ ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.

Terrorist Attack

ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಮೂರು ದಿನಗಳಲ್ಲಿ ನಡೆದಿರುವ ಮೂರನೇ ಉಗ್ರರ ದಾಳಿ ಇದಾಗಿದ್ದು ಮೊದಲು ಕತುವಾದಲ್ಲಿ ಗುಂಡಿನ ದಾಳಿ ನಡೆಸಿದ್ದ ಉಗ್ರರು ನಾಗರಿಕರೊಬ್ಬರನ್ನು ಗಾಯಗೊಳಿಸಿದ್ದರು. ಅದರ ಬೆನ್ನಲ್ಲೇ ರೀಸಿಯಲ್ಲಿ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದರು.ಇನ್ನು ಉಗ್ರರ ದಾಳಿಯಲ್ಲಿ 9 ಮಂದಿ ಯಾತ್ರಿಕರು ಮೃತಪಟ್ಟಿದ್ದರು. 33 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕಥುವಾದಲ್ಲಿ ಮಂಗಳವಾರ ರಾತ್ರಿ ಎನ್‌ಕೌಂಟರ್‌ (Encounter) ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆನಂದ್ ಜೈನ್ (Anand Jain) ಹೇಳಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಮೂರು ಪ್ರದೇಶಗಳಲ್ಲಿ ಉಗ್ರರು ದಾಳಿ ನಡೆಸಿದ್ದು ಚತ್ತರಗಾಲ ಪ್ರದೇಶದಲ್ಲಿ ಸೇನಾ ನೆಲೆಯಲ್ಲಿನ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್‌ನ ಜಂಟಿ ಪಡೆಗಳ ಮೇಲೆ ಮಂಗಳವಾರ ತಡರಾತ್ರಿ ಉಗ್ರರು ಗುಂಡಿನ ಸುರಿಮಳೆಗರೆದಿದ್ದಾರೆ. ಬೆಟ್ಟ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಪ್ರದೇಶಗಳು ಎಂದು ಗುರುತಿಸಲಾಗಿರುವ ಸ್ಥಳಗಳಲ್ಲಿಯೇ ಇತ್ತೀಚಿಗೆ ಹೆಚ್ಚಿನ ದಾಳಿಗಳು ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆಗೆ ಸೂಚಿಸಲಾಗಿದೆ.

Exit mobile version