ಶ್ರೀನಗರ ಡಿ 13: ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಉಗ್ರರ ಅಟ್ಟ ಹಾಸ ಮುಂದುವರೆದಿದೆ. ಕಾಶ್ಮೀರದ ಉತ್ತರ ಕಾಶ್ಮೀರ ಬಂಡಿಪೋರಾ ಜಿಲ್ಲೆಯ ಗುಲ್ಮಾನ್ ಚೌಕ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಎಂಬ ಇಬ್ಬರು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ. ಪೊಲೀಸರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.