ರಜೌರಿ ಎನ್​ಕೌಂಟರ್: ರಾಜ್ಯದ ಯೋಧ ಸೇರಿದಂತೆ ನಾಲ್ವರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ (Rajouri) ಜಿಲ್ಲೆಯಲ್ಲಿ ಬುಧವಾರ (ಸೆಪ್ಟೆಂಬರ್ 22) ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ (Encounter) ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದರೆ, ಒಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭದ್ರತಾ ಪಡೆಗಳು ಸ್ಥಳದಲ್ಲೇ ಇಬ್ಬರು ಭಯೋತ್ಪಾದಕರನ್ನು ಸುತ್ತುವರಿದಿದ್ದಾರೆ ಮತ್ತು ಭೀಕರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯೋತ್ಪಾದಕರನ್ನು ಹತ್ಯೆಗೈಯಲು ಹೆಚ್ಚಿನ ಸೈನಿಕರನ್ನು ಕಳುಹಿಸಲಾಗಿದ್ದು, ಧರ್ಮಸಾಲ್‌ನ ಬಾಜಿಮಲ್ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ (Jammu-Kashmir) ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಯೋತ್ಪಾದಕರ ಪತ್ತೆಗಾಗಿ ಭಾನುವಾರದಿಂದ ಕಾರ್ಡನ್ (Cordon) ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಅಲ್ಲಿನ ಸ್ಥಳೀಯರಿಗೆ ಮನೆ ಬಿಟ್ಟು ಹೊರಗಡೆ ತೆರಳದಂತೆ ಸೂಚಿಸಲಾಗಿದ್ದು, ಮಕ್ಕಳು ಕೂಡ ಶಾಲೆಗೆ ಹೋಗದೆ ಮನೆಯಲ್ಲೇ ಉಳಿದಿದ್ದರು.

ಇನ್ನು ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆಯುತ್ತಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದು, ಇಬ್ಬರು ಭಯೋತ್ಪಾದಕರು ವಿದೇಶಿ ಪ್ರಜೆಯಾಗಿದ್ದಾರೆ ಮತ್ತು ಇದೇ ಪ್ರದೇಶದಲ್ಲಿ ತಿರುಗಾಡುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ.

ಭಾರತದ ಮೇಲೆ ದಾಳಿ ನಡೆಸಲು ಪ್ರತಿ ದಿನವೂ ಒಂದಲ್ಲಾ ಒಂದು ರೀತಿಯಲ್ಲಿ ಉಗ್ರರು ಯತ್ನಿಸುತ್ತಲೇ ಇರುತ್ತಾರೆ, ಆದರೆ ಗಡಿ ಭದ್ರತಾ ಪಡೆ ಅದ್ಯಾವುದಕ್ಕೂ ಕಿಂಚಿತ್ತು ಅವಕಾಶವನ್ನು ಮಾಡಿಕೊಡುತ್ತಿಲ್ಲ.

ಭವ್ಯಶ್ರೀ ಆರ್.ಜೆ

Exit mobile version