ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಜುಲೈ 11ರಂದು ಪ್ರಮಾಣವಚನ

ಬೆಂಗಳೂರು, ಜು. 09: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 11ರಂದು (ಭಾನುವಾರ) ಬೆಳಿಗ್ಗೆ 10:30ಕ್ಕೆ ರಾಜ ಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

ಥಾವರ್‌ಚಂದ್‌ ಗೆಹ್ಲೋಟ್, ಮಧ್ಯಪ್ರದೇಶದ ನಾಗ್ಡಾದವರು. ಮೂರು ಬಾರಿ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್‌, ರಾಜ್ಯಸಭೆಯ ಸದಸ್ಯರಾಗಿದ್ದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿದ್ದರು.

Exit mobile version