download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಕೊರೊನಾಕ್ಕೆ ನಾಟಿ ಮದ್ದು ನೀಡಲು ನೆಲ್ಲೂರು ಆನಂದಯ್ಯರಿಗೆ ಆಂಧ್ರ ಸರ್ಕಾರ ಒಪ್ಪಿಗೆ

ಕೊರೊನಾಗೆ ನಾಟಿ ಔಷಧ ನೀಡುವ ಮೂಲಕ ನೆಲ್ಲೂರಿನ ಕೃಷ್ಣಪಟ್ಟಣಂ ಆನಂದಯ್ಯ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದರು. ಇದೀಗ ಭಾರೀ ಚರ್ಚೆಗಳು, ಪರೀಕ್ಷೆಗಳ ಬಳಿಕ ಕೆಲ ಷರತ್ತುಗಳೊಂದಿಗೆ ಆನಂದಯ್ಯ ಕೊರೊನಾ ಔಷಧಕ್ಕೆ ಗ್ರೀನ್​ ಸಿಗ್ನಲ್ ನೀಡಿರುವುದಾಗಿ ಆಂಧ್ರಪ್ರದೇಶದ ಸಿಎಂ ಕಚೇರಿ ತಿಳಿಸಿದೆ.

ಹೈದರಾಬಾದ್‌, ಮೇ. 31: ಕೊರೊನಾ ವೈರಸ್ ವಿರುದ್ಧ ಆಯುರ್ವೇದ ಔಷಧ ನೀಡುವುದನ್ನು ಮುಂದುವರಿಸುವಂತೆ ನಾಟಿ ವೈದ್ಯ ಆನಂದಯ್ಯ ಅವರಿಗೆ ಆಂಧ್ರಪ್ರದೇಶ ಸರ್ಕಾರದ ಒಪ್ಪಿಗೆ ಸೂಚಿಸಿದೆ. ಕೊರೊನಾಗೆ ನಾಟಿ ಔಷಧ ನೀಡುವ ಮೂಲಕ ನೆಲ್ಲೂರಿನ ಕೃಷ್ಣಪಟ್ಟಣಂ ಆನಂದಯ್ಯ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದರು. ಇದೀಗ ಭಾರೀ ಚರ್ಚೆಗಳು, ಪರೀಕ್ಷೆಗಳ ಬಳಿಕ ಕೆಲ ಷರತ್ತುಗಳೊಂದಿಗೆ ಆನಂದಯ್ಯ ಕೊರೊನಾ ಔಷಧಕ್ಕೆ ಗ್ರೀನ್​ ಸಿಗ್ನಲ್ ನೀಡಿರುವುದಾಗಿ ಆಂಧ್ರಪ್ರದೇಶದ ಸಿಎಂ ಕಚೇರಿ ತಿಳಿಸಿದೆ.

AYUSH ಸಚಿವಾಲಯದ ಕೇಂದ್ರೀಯ ಆಯುರ್ವೇದ ಪರಿಶೋಧನೆ ಸಂಸ್ಥೆ ಸಮಿತಿ ಅನುಮೋದನೆ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಆಂಧ್ರ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಕಣ್ಣಿಗೆ ಡ್ರಾಪ್ ಮಾತ್ರ ಹಾಕುವಂತಿಲ್ಲ ಎಂದು ಷರತ್ತು ವಿಧಿಸಿದೆ. ಕಣ್ಣಿಗೆ ಡ್ರಾಪ್ ಹಾಕುವ ವೈದ್ಯ ಪದ್ಧತಿಯ ಬಗ್ಗೆ ಸಂಶೋಧನಾ ವರದಿ ಬರಬೇಕಾಗಿದ್ದು, ಅದಕ್ಕೆ ಇನ್ನೂ 2-3 ವಾರ ಸಮಯ ಹಿಡಿಸುತ್ತದೆ ಎಂದು ಹೇಳಿದೆ.

ಆನಂದಯ್ಯ ನೀಡುವ ಆಯುರ್ವೇದ ಔಷಧದಿಂದ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತದೆ, ಕಡಿಮೆಯಾಗುತ್ತದೆ ಎಂಬುದಕ್ಕೆ ಇನ್ನೂ ಪುಷ್ಠಿ ದೊರೆತಿಲ್ಲ ಎಂದೂ ಸಮಿತಿ ಸ್ಪಷ್ಟಪಡಿಸಿದೆ. ಇದರೊಂದಿಗೆ ಜನ ತಮ್ಮ ಸ್ವ ಇಚ್ಛೆಯಿಂದ ಆನಂದಯ್ಯ ನಾಟಿ ಔಷಧ ಬಳಸಬಹುದು ಎಂದು ಆಂಧ್ರ ಸರ್ಕಾರ ಸ್ಪಷ್ಟಪಡಿಸಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article