Visit Channel

ರಕ್ಷಣೆ ನೀಡುವುದು ಸರ್ಕಾರದ ಮೂಲಭೂತ ಕರ್ತವ್ಯ: ಡಿಕೆಶಿ

541

ಬೆಂಗಳೂರು, ಮಾ. 26: ರಕ್ಷಣೆ ನೀಡುವುದು, ದೌರ್ಜನ್ಯ ಆಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಹೇಳಬೇಕಾಗಿರುವುದನ್ನೆಲ್ಲಾ ಸದನದಲ್ಲಿ ಹೇಳಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂತ್ರಸ್ತ ಯುವತಿಯ ವಿಡಿಯೋ ನಾನು ನೋಡಿಲ್ಲ. ಈಗಷ್ಟೇ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಎಕನಾಮಿಕ್ ಅಫೆನ್ಸ್ ಪ್ರಕರಣದ ವಿಚಾರಣೆ ಇತ್ತು. ಅದಕ್ಕೆ ಹಾಜರಾಗಿ ಈಗಷ್ಟೇ ಬಂದಿದ್ದೇನೆ. ಕಳೆದ ಬಾರಿ ಹೋಗಲು ಆಗಿರಲಿಲ್ಲ. ಹೀಗಾಗಿ ಇವತ್ತು ಹೋಗಿ ಬಂದಿದ್ದೇನೆ. ಈ ವಿಡಿಯೋ ಏನು ಎಂಬುದನ್ನು ನೋಡುತ್ತೇನೆ’ ಎಂದು ತಿಳಿಸಿದರು.

‘ಈ ವಿಚಾರದಲ್ಲಿ ನನ್ನದೇನು ಹೇಳಲು ಇಲ್ಲ. ನಾನು ಏನೇನು ಮಾತನಾಡಬೇಕೋ ಅದನ್ನು ಸದನದಲ್ಲಿ ಮಾತನಾಡಿದ್ದೇನೆ. ಮಿಕ್ಕಿದ್ದನ್ನು ವಿಡಿಯೋ ನೋಡಿದ ನಂತರ ನಿರ್ಧರಿಸುತ್ತೇನೆ’ ಎಂದರು.

ಇನ್ನು ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸುತ್ತಾ, ‘ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡುವುದು ಬೇಡ ಎಂದು ಹೇಳಿದವರು ಯಾರು? ಅದರಲ್ಲಿ ಶಾಕ್ ಆದರೂ ಇರಲಿ, ಏನಾದರೂ ಇರಲಿ. ಅವರಿಗೆ ಒಳ್ಳೆಯದಾಗಲಿ ಪಾಪ’ ಎಂದರು.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.