ಡಿಬಾಸ್ ಅಭಿನಯದ ರಾಬರ್ಟ್ ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್; “ಕಣ್ಣು ಹೊಡಿಯಾಕೆ” ಹಾಡಿಗೆ ಫ್ಯಾನ್ಸ್ ಫಿದಾ

ಬೆಂಗಳೂರು: ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ 4ನೇ ಹಾಡು ರಿಲೀಸ್​ ಆಗಿದೆ. “ಕಣ್ಣು ಹೊಡಿಯಾಕೆ” ಹಾಡಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಇತ್ತೀಚೆಗಷ್ಟೇ ರಾಬರ್ಟ್ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರರಸಿಕರಲ್ಲಿ ಕುತೂಹಲ ಮೂಡಿಸಿತ್ತು. ಇದೀಗ ಸಿನಿಮಾದ ರೊಮ್ಯಾಂಟಿಕ್ ಹಾಡನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಆ ಮೂಲಕ ಚಿತ್ರದ ಮೇಲೆ ಮತ್ತಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಗಾಯಕಿ ಶ್ರೇಯಾ ಘೋಷಾಲ್ ಹಾಡಿರುವ ಈ ಹಾಡಿಗೆ ವಿಕಟ ಕವಿ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಹಾಡನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಡಿಬಾಸ್ ಅಭಿನಯದ ರಾಬರ್ಟ್​ ಚಿತ್ರ ದಕ್ಷಿಣ ಭಾರತದ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ.

ಮಾರ್ಚ್​ 11ರಂದು ಬೆಳ್ಳಿತೆರೆಗೆ ಬರಲು ಸಿದ್ಧವಾಗಿರುವ ರಾಬರ್ಟ್ ಸಿನಿಮಾ ಉಮಾಪತಿ ಬ್ಯಾನರ್ಸ್ ಅಡಿಯಲ್ಲಿ ತಯಾರಾಗಿದೆ. ಚಿತ್ರಕ್ಕೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದೆ. ಚಾಲೆಂಜಿಗ್ ಸ್ಟಾರ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್, ಆಶಾ ಭಟ್, ಜಗಪತಿ ಬಾಬು, ರವಿಶಂಕರ್ ಇನ್ನಿತರರು ಅಭಿನಯಿಸಿದ್ದಾರೆ.

Exit mobile version