Haveri: ರಾಜ್ಯದಲ್ಲಿ (State) ಆರ್ಥಿಕ ಸಂಕಷ್ಟವಿಲ್ಲ ಹಾಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಕೂಡ ಬಿಪಿಎಲ್ ಕಾರ್ಡ್ (BPL card) ಕಸಿಯುವುದಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು (Congress win) ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ ಮಾತನಾಡಿದ್ದಾರೆ.
ದೇಶದಲ್ಲಿ ಬಿಜೆಪಿ (BJP) ಆಡಳಿತ ಇರುವ ಯಾವುದೇ ರಾಜ್ಯದಲ್ಲೂ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತಿಲ್ಲ. ಯಾವುದಾದರೂ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದನ್ನು ಬಿಜೆಪಿಗರು ತೋರಿಸಿದ್ದೇ ಆದರೆ, ಈಗಲೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಯಡಿಯೂರಪ್ಪ, ಬೊಮ್ಮಾಯಿಯವರೇ, ನಾನು ಕೊಟ್ಟಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದು ಯಾರಪ್ಪಾ? ಬಿಜೆಪಿಗಯ ನಾಯಕರಿಗೆ (Leaders of the BJP) ಬಡವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯೂ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ 10 ಕೆಜಿ ನೀಡಲಾಗುತ್ತಿದೆ. ರೂ.34 ಕೊಡುತ್ತೇವೆ ಅಕ್ಕಿ ಕೊಡಿ ಎಂದರೆ ಕೇಂದ್ರ ಸರ್ಕಾರ ಅಕ್ಕಿ (Central Government rice) ಕೊಡಲಿಲ್ಲ. ಹೀಗಾಗಿ 5 ಕೆಜಿ ಬದಲಾಗಿ ಹಣ ಕೊಡುತ್ತಿದ್ದೇವೆ. ನಾವು ಯಾವುದೇ ಕಾರಣಕ್ಕೂ ಒಂದು ಕೆಜಿ ಅಕ್ಕಿಯನ್ನೂ (One kg of rice too) ಕಡಿಮೆ ಮಾಡಲ್ಲ. ಎಷ್ಟೇ ಹಣ ಖರ್ಚಾದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದು ಪುನರುಚ್ಛರಿಸಿದ್ದಾರೆ.
ಈ ಕ್ಷೇತ್ರದ ಜನ ಜಾತಿ, ಧರ್ಮ (People caste, religion of the constituency) ನೋಡಲ್ಲ. ಕಾಂಗ್ರೆಸ್ ಕಾರ್ಯಕ್ರಮ, ಸಿದ್ಧಾಂತ ನೋಡಿ ಮತ ಹಾಕುತ್ತಾರೆಂಬ ಧೈರ್ಯ ಇತ್ತು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿಗರು ಅಪಪ್ರಚಾರ ಮಾಡಿದ್ದರು. ಈಗ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಮಧ್ಯವರ್ತಿಗಳು ಇಲ್ಲದೇ ಜನರಿಗೆ ನೇರವಾಗಿ ಹಣ ತಲುಪುತ್ತಿದೆ. ರಾಜ್ಯದ 4.5 ಕೋಟಿ ಜನರಿಗೆ ನಮ್ಮ ಕಾರ್ಯಕ್ರಮ ತಲುಪುತ್ತಿವೆ (Program is reaching) . ಪ್ರತಿ ಕುಟುಂಬಕ್ಕೆ ಪ್ರತಿ ವರ್ಷ ರೂ.45-50 ಸಾವಿರ ಸಿಗುತ್ತಿದೆ. ಪ್ರತಿ ವರ್ಷ ರೂ.56 ಸಾವಿರ ಕೋಟಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿದೆ.2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ನಂಬಿಕೆ ನನಗಿದೆ.ಆಗಲೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಕೇಂದ್ರ ಸರ್ಕಾರ (Central Govt) ನಮಗೆ ನ್ಯಾಯಯುತವಾಗಿ ಕೊಡಬೇಕಾದ ಹಣವನ್ನು ಸರಿಯಾಗಿ ಕೊಡುತ್ತಿಲ್ಲ. ತೆರಿಗೆ ಪಾಲು ಕೊಡುತ್ತಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ (Centrally awarded projects) ಸರಿಯಾಗಿ ಹಣ ಕೊಡುತ್ತಿಲ್ಲ. ಹಣ ಸಿಗದಂತೆ ಮಾಡಿ ನಮಗೆ ತೊಂದರೆ ಮಾಡುತ್ತಿದ್ದಾರೆ. ಎಷ್ಟೇ ಹಣಕಾಸಿನ ತೊಂದರೆ ಕೊಟ್ಟರೂ ಗ್ಯಾರಂಟಗಳನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದ್ದಾರೆ.