download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಕೊರೋನಾ ಎರಡನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಮತ್ತೆ ಲಾಕ್​ಡೌನ್​ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆಯಾದರೂ, ಜನರು ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೊರೋನಾ ನಿಯಮಾವಳಿಗಳನ್ನು ಪಾಲಿಸುತ್ತಿದ್ದಾರೆಯೇ? ಎಂದು ಕಟ್ಟುನಿಟ್ಟಾಗಿ ಗಮನಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ನವ ದೆಹಲಿ, ಮಾ. 22: ದೇಶದಲ್ಲಿ ಕೊರೋನಾದ ಎರಡನೇ ಅಲೆ ಶುರುವಾಗಿದೆ. ಕಳೆದ ವರ್ಷದ ಕೊನೆಯಲ್ಲಿ ನಿಯಂತ್ರಣಕ್ಕೆ ಬಂದಿದ್ದ ಕೊರೋನಾ ಸೋಂಕಿನ ಪ್ರಕರಣ ಇದೀಗ ಮತ್ತೆ ನಿಯಂತ್ರಣ ಮೀರಿದೆ.

ದಿನೇ ದಿನೇ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮತ್ತೊಮ್ಮೆ ಲಾಕ್​ಡೌನ್​ ಕುರಿತ ಮಾತುಗಳು ಕೇಳಿಬರುತ್ತಿದೆ. ಆದರೆ ಮತ್ತೆ ಲಾಕ್​ಡೌನ್​ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆಯಾದರೂ, ಜನರು ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೊರೋನಾ ನಿಯಮಾವಳಿಗಳನ್ನು ಪಾಲಿಸುತ್ತಿದ್ದಾರೆಯೇ? ಎಂದು ಕಟ್ಟುನಿಟ್ಟಾಗಿ ಗಮನಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ನಿರ್ದೆಶನ ನೀಡಿರುವ ಕೇಂದ್ರ, “ಕೊರೋನಾ ಪ್ರಕರಣಗಳು ಹಠಾತ್ ಉಲ್ಬಣವಾಗಲು ಜನರು, ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ಕಿಕ್ಕಿರಿದ ಸ್ಥಳಗಳಲ್ಲಿ ಕೊರೋನಾ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೆ ಇರುವುದೇ ಕಾರಣ. ಹೀಗಾಗಿ ಜನ ಕೊರೋನಾ ನಿಯಮಾವಳಿಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು” ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.

ಪ್ರಕರಣಗಳ ಸಂಖ್ಯೆಯಲ್ಲಿನ ಹೊಸ ಏರಿಕೆ ಮತ್ತು ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಕೊರೋನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮುಖ್ಯ” ಎಂದು ಕೇಂದ್ರ ಗೃಹ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ.
ಪ್ರಸ್ತುತ ದೇಶದಲ್ಲಿ 40,953 ಹೊಸ ಕೊರೋನಾ ಪ್ರಕರಣಗಳಿವೆ. ಈ ಸಂಖ್ಯೆ ನವೆಂಬರ್ 29 ರ ನಂತರದ ಗರಿಷ್ಠ ದೈನಂದಿನ ಏರಿಕೆಯಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತೋರಿಸುತ್ತವೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article