ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅ*ಚಾರ ಎಸಗಿ ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.
ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ ದೊಡ್ಡ ಮಟ್ಟದ ಮೊತ್ತದ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.
ಪ್ರಜ್ವಲ್‌ಗೆ ಇವತ್ತಿನಿಂದಲೇ ಶಿಕ್ಷೆ ಆರಂಭವಾಗಲಿದ್ದು, ಐಪಿಸಿ ಸೆಕ್ಷನ್ 376(2)(k), 376(2)(n), 354(b) ಅಡಿಯಲ್ಲಿ ಶಿಕ್ಷೆ ಪ್ರಕಟವಾಗಿದೆ.
ಇನ್ನೂ 3 ಪ್ರಕರಣಗಳು ಇದೇ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಜೀವಾವಧಿ ಶಿಕ್ಷೆ ಅಂದರೇ, ಜೀವನ ಪರ್ಯಂತ ಜೈಲುವಾಸದ ಶಿಕ್ಷೆಯನ್ನು ವಿಧಿಸಿದೆ.

Prajwal Revanna
ಐಪಿಸಿ ಸೆಕ್ಷನ್ 376(2)(N) ನಡಿ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ.
ಐಪಿಸಿ ಸೆಕ್ಷನ್ 376 (2)(k)ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ, 376(2)(n) ಅಡಿ ಪದೇಪದೆ ಅ*ಚಾರಕ್ಕೆ ಜೀವನಪರ್ಯಂತ ಜೈಲು ವಾಸ, 5 ಲಕ್ಷ ರೂ. ದಂಡವನ್ನು ಪ್ರಕಟಿಸಿದೆ.
ದಂಡದ ಹಣದಲ್ಲಿ ಸಂತ್ರಸ್ತೆಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲು ಕೋರ್ಟ್ ಆದೇಶ ನೀಡಿದೆ. ಜೀವನ ಪರ್ಯಂತ ಜೈಲಿನಲ್ಲಿರುವ ಶಿಕ್ಷೆಯು ಪ್ರಜ್ವಲ್ ರೇವಣ್ಣ ಪಾಲಿಗಂತೂ ದೊಡ್ಡ ಶಾಕ್
ಜೊತೆಗೆ ರಾಜ್ಯಕೀಯ ಭವಿಷ್ಯಕ್ಕೆ ನೀರೆರಚಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭವಾಗಲಿದ್ದು, ಇಲ್ಲಿಯವರೆಗಿನ ಜೈಲುವಾಸ ಕಡಿಮೆ ಆಗುವುದಿಲ್ಲ.
ಏಕೆಂದರೆ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಂತ್ರಸ್ತರಿಗೆ ನ್ಯಾಯ ನೀಡಿದೆ ಎಂದು ಅನೇಕರು ಕೋರ್ಟ್ ತೀರ್ಪಿಗೆ ಸಂತಸ ಸೂಚಿಸಿದ್ದಾರೆ.
ಕೇವಲ 4 ತಿಂಗಳ ದಾಖಲೆ ಸಮಯದಲ್ಲೇ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸಿದ್ದಾರೆ. ಇದರೊಂದಿಗೆ,
ಮೂರು ಅ*ಚಾರ ಪ್ರಕರಣ, 1 ಲೈಂ*ಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದಕ್ಕೆ ಮಾತ್ರ ತೀರ್ಪು ದೊರೆತಿದೆ .
ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು.
ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯ ನೀಚ ಕೆಲಸಕ್ಕೆ ಗರಿಷ್ಠ ಜೀವಾವಧಿ ಶಿಕ್ಷೆ ನೀಡಬೇಕು ಅಂತ ಪ್ರಾಸಿಕ್ಯೂಷನ್ ಮನವಿ ಮಾಡಿಕೊಂಡಿತ್ತು.
ಇದನ್ನು ಓದಿ : ಅ*ಚಾರ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ! ಅ*ಚಾರ ಕೇಸ್‌ನಲ್ಲಿ ದೋಷಿ ಎಂದು ಕೋರ್ಟ್‌ನಿಂದ ತೀರ್ಪು.
ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.