ವಿಶ್ವಸಂಸ್ಥೆ, ಜು. 07: ಭಾರತದ ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರ ಸಾವು ‘ಮಹಾ ದುರಂತ’ ಎಂದು ವಿಶ್ವಸಂಸ್ಥೆ ಹಾಗೂ ಐರೋಪ್ಯ ಒಕ್ಕೂಟದ ಮಾನವ ಹಕ್ಕುಗಳ ಸಂಘಟನೆ ಕಳವಳ ವ್ಯಕ್ತಪಡಿಸಿವೆ.
ಅವರ ವಿರುದ್ಧ ಭಯೋತ್ಪಾದನೆಗೆ ಪ್ರಚೋದನೆ ನೀಡಿದ ಸುಳ್ಳು ಆರೋಪಗಳನ್ನು ಹೊರಿಸಿ, ಸೆರೆಯಲ್ಲಿರಿಸಲಾಗಿತ್ತು ಎಂದೂ ಈ ಜಾಗತಿಕ ಸಂಸ್ಥೆಗಳು ಹೇಳಿವೆ.
ಭಾರತದಲ್ಲಿ ಮಾನವ ಹಕ್ಕುಗಳ ಹೋರಾಟಗಾರ, ಫಾದರ್ ಸ್ಟ್ಯಾನ್ ಸ್ವಾಮಿ ಅವರು ಸೆರೆಯಲ್ಲಿರುವಾಗಲೇ ಮೃತಪಟ್ಟಿದ್ದಾರೆ ಎಂಬ ಸುದ್ದಿ ಬಹಳ ದುಃಖಕರ. ಇದು ಮಹಾದುರಂತವೂ ಹೌದು. ಮಾನವ ಹಕ್ಕುಗಳಿಗಾಗಿ ಹೋರಾಡುವ ವ್ಯಕ್ತಿಯನ್ನು ಜೈಲಿಗೆ ಅಟ್ಟಿದ್ದು ಅಕ್ಷಮ್ಯ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಕ್ಷಣೆ ವಿಭಾಗದ ವಿಶೇಷ ವರದಿಗಾರರಾದ ಮೇರಿ ಲಾಲರ್ ಅಸಮಾಧಾನ ಹೊರಹಾಕಿದ್ದಾರೆ.