100 ಹೆಚ್ಚುವರಿ ರೈಲು ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಇಲಾಖೆ

ನವದೆಹಲಿ,ಜೂ.15: ಹಲವಾರು ರಾಜ್ಯಗಳು ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದ್ದು, ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚು ರೈಲುಗಳ ಕಾರ್ಯಾಚರಣೆ ಮಾಡಲು ಭಾರತೀಯ ರೈಲ್ವೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರವೇ ಓಡಿಸಲು ನಿರ್ಧರಿಸಿದೆ.

ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಮುಂಗಡವಾಗಿ ಕಾಯ್ದಿರಿಸುವ ದರ್ಜೆಗೆ ಪ್ರಯಾಣಿಕರು ಹೆಚ್ಚು ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದಾಗಿ ಹೆಚ್ಚು ಅಂತರದ ಸ್ಥಳಗಳ ನಡುವೆ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ಚಾಲನೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಗಳ ಅಗತ್ಯಗಳಿಗೆ ಅನುಗುಣವಾಗಿ ಹೆಚ್ಚು ರೈಲುಗಳನ್ನು ಆರಂಭಿಸಬಹುದು. ಆದ್ದರಿಂದ, ರಾಜ್ಯ ಸರ್ಕಾರಗಳ ಜೊತೆ ಸಂಪರ್ಕದಲ್ಲಿ ಇರಲು ರೈಲ್ವೆ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಶೇಷ ರೈಲುಗಳನ್ನು ಹೆಚ್ಚಾಗಿ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಜಾರ್ಖಂಡ್‌ ರಾಜ್ಯಗಳಿಂದ ಮಹಾನಗರಗಳಾದ ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ಗೆ ಬಿಡಲಾಗುವುದು. ರೈಲ್ವೆ ಸೇವೆಯನ್ನು ಆದಷ್ಟು ಬೇಗ ಸಹಜಸ್ಥಿತಿಗೆ ತರಲು ಭಾರತೀಯ ರೈಲ್ವೆ ಉತ್ಸುಕವಾಗಿದೆ. ಕ್ರಮೇಣ ಸೇವೆಯನ್ನು ಹೆಚ್ಚಿಸಲಾಗುತ್ತದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮ ಸುದ್ದಿಗಾರರಿಗೆ ಹೇಳಿದ್ದರು.

ಈಗ ದಿನಕ್ಕೆ ಸುಮಾರು 900 ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳು ಓಡಾಡುತ್ತಿವೆ. ಕೋವಿಡ್‌ ಸಾಂಕ್ರಾಮಿಕದ ಎರಡನೇ ಅಲೆ ಆರಂಭವಾಗುವ ಮೊದಲು 1,500 ರೈಲುಗಳು ಓಡಾಡುತ್ತಿದ್ದವು

Exit mobile version