Visit Channel

ಸದ್ದು ಮಾಡುತ್ತಿದೆ ಚಕ್ರವರ್ತಿಯ ಹಾಡು!

WhatsApp Image 2021-07-29 at 3.50.59 PM

ಬಿಗ್ ಬಾಸ್ ಸ್ಪರ್ಧಿಯಾಗಿ ಹೋಗಿ ಈ ವಾರ ಎಲಿಮಿನೇಟ್ ಆಗಿ ಬಂದವರು ಚಕ್ರವರ್ತಿ ಚಂದ್ರಚೂಡ್. ಬಿಗ್ ಬಾಸ್ ವೇದಿಕೆಯಿಂದ ಬಂದ ಕಾರಣ ಅವರಿಗೆ ಈಗ ಫಾಲೋಯರ್ಸ್ ಹೆಚ್ಚಿದ್ದಾರೆ. ಈಗ ಅವರ ಕೆಲಸಗಳ ಬಗ್ಗೆ ಜಾಲಾಡುತ್ತಿರುವವರಿಗೆ ಜಾಲತಾಣದಲ್ಲಿ ಜನಪ್ರಿಯವಾಗಿರುವ ಚಕ್ರವರ್ತಿ ರಚನೆಯ ಹಾಡು ಗೋಚರಿಸಿದೆ.

ಇತ್ತೀಚೆಗೆ ರಾಷ್ಟ್ರಪ್ರಶಸ್ತಿ ನಟ ಸಂಚಾರಿ ವಿಜಯ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮೇಲೊಬ್ಬ ಮಾಯಾವಿ ಚಿತ್ರತಂಡ ಕಂಟೆಂಟ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿತ್ತು. ಹರಳು ಮಾಫಿಯಾದ ಕಂಟೆಂಟ್ ಅನ್ನು ಹೊತ್ತಿದ್ದ ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿತ್ತು.

ಈಗ ಚಿತ್ರ ತಂಡ ಚಿತ್ರದ ಟೈಟಲ್ ವಿಡಿಯೋ ಸಾಂಗ್ ಅನ್ನು ಬಿಡಿಗಡೆಗೊಳಿಸಿದೆ. ಬಿಗ್ ಬಾಸ್ ಖ್ಯಾತಿಯ, ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಸಾಹಿತ್ಯ ಇರುವ ಈ ಹಾಡನ್ನು ಎಲ್.ಎನ್.ಶಾಸ್ತ್ರೀ, ಹೇಮಂತ್ ಮತ್ತು ಶಮಿತಾ ಮಲ್ನಾಡ್ ಹಾಡಿದ್ದಾರೆ.

ಎಲ್.ಎನ್.ಶಾಸ್ತ್ರೀಯವರು ತಮ್ಮ ಕೊನೆಯ ದಿನಗಳಲ್ಲಿ ಹಾಡಿದ ಈ ಹಾಡು ಸಾಕಷ್ಟು ಅರ್ಥಗರ್ಭಿತವಾಗಿದ್ದು ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ. ಕರಾವಳಿಯಲ್ಲಿ ನಡೆದ ಸತ್ಯ ಕಥೆ ಆಧಾರಿತ ಈ ಚಿತ್ರವನ್ನು ಬಿ.ನವೀನ್ ಕೃಷ್ಣ ಕಥೆ, ಬರೆದು ನಿರ್ದೇಶಿಸಿದ್ದಾರೆ. ಶ್ರೀ ಕಟೀಲ್ ಸಿನಿಮಾಸ್ ಲಾಂಛನದಲ್ಲಿ ಭರತ್ ಹಾಗೂ ತನ್ವಿ ಅಮಿನ್ ಕೊಲ್ಯ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಚಿತ್ರಕ್ಕೆ ಎಲ್‌.ಎನ್. ಶಾಸ್ತ್ರಿ ಸಂಗೀತ ನೀಡಿದ್ದು, ಚಕ್ರವರ್ತಿ ಚಂದ್ರಚೂಡ್ ಚಿತ್ರದ ಎಲ್ಲಾ ಹಾಡುಗಳ ಸಾಹಿತ್ಯ ರಚಿಸಿದ್ದಾರೆ. ಕೆ.ಗಿರೀಶ್‌ ಕುಮಾರ್‌ ಸಂಕಲನಕಾರರಾಗಿರುವ ʻಮೇಲೊಬ್ಬ ಮಾಯಾವಿʼಗೆ, ದೀಪಿತ್‌ ಬಿಜೈ ರತ್ನಾಕರ್‌ ಛಾಯಾಗ್ರಹಣ ಮಾಡಿದ್ದಾರೆ. ದೇಸಿ ಸೊಗಡಿನ ಈ ಹಾಡಿಗೆ ರಾಮು ಅವರ ನೃತ್ಯ ನಿರ್ದೇಶನವಿದೆ. ಮಣಿಕಾಂತ್‌ ಕದ್ರಿ ಹಿನ್ನಲೆ ಸಂಗೀತ ನೀಡಿರುವ ಈ ಚಿತ್ರದಲ್ಲಿ ಸಂಚಾರಿ ವಿಜಯ್‌, ಅನನ್ಯ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್‌, ಕೃಷ್ಣಮೂರ್ತಿ ಕವತ್ತಾರ್‌, ಎಮ್‌.ಕೆ.ಮಠ, ಬೆನಕ ನಂಜಪ್ಪ, ಮಾಸ್ಟರ್‌ ಲಕ್ಷ್ಮೀ ಅರ್ಪಣ್‌, ನವೀನ್‌ಕುಮಾರ್‌, ಪವಿತ್ರಾ ಜಯರಾಮ್‌, ಮುಖೇಶ್‌, ಡಾ||ಮನೋನ್ಮಣಿ, ಸೇರಿದಂತೆ ಸಾಕಷ್ಟು ರಂಗಭೂಮಿ ನಟರು ಚಿತ್ರದಲ್ಲಿ ನಟಿಸಿದ್ದಾರೆ. ಅಗಸ್ಟ್ ತಿಂಗಳ ಕೊನೆಯ ವಾರದಲ್ಲಿ “ಮೇಲೊಬ್ಬ ಮಾಯಾವಿ”ಚಿತ್ರ ತೆರೆಗೆ ಬರಲಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.