ಪತ್ರಕರ್ತರಿಗೆ ಸಿಎಂ ಲಂಚ ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ ಜೆಎಸ್ಪಿ!

Bengaluru : ದ ಫೈಲ್ಸ್(The File Report) ಪತ್ರಿಕೆ ನೀಡಿರುವ ವರದಿಯ ಅನುಸಾರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿಬಂದಿರುವ ಗಂಭೀರ ಆರೋಪದ ಕುರಿತು ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಭ್ರಷ್ಟಾಚಾರದ(Corruption) ವಿರುದ್ಧ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್ ಇದೀಗ,

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಎಂಬುವರ ವಿರುದ್ಧ ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್ ವಿಭಾಗದ ಎಡಿಜಿಪಿ ಅವರಿಗೆ ದೂರು ನೀಡಿದೆ.

ಡೆಕ್ಕನ್ ಹೆರಾಲ್ಡ್(Deccan Herald) ಮತ್ತು ಪ್ರಜಾವಾಣಿಯ(Prajavani) ಪ್ರಧಾನ/ಮುಖ್ಯ ವರದಿಗಾರರೊಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್ ನೊಂದಿಗೆ 1ಲಕ್ಷ ₹ ನಗದನ್ನಿರಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ನಗದು ನೀಡಿದ್ದಾರೆ ಎಂದು ದೂರಿರುವ ಜನಾಧಿಕಾರ ಸಂಘರ್ಷ ಪರಿಷತ್.

ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕ ವಿರುದ್ಧ ಭ್ರಷ್ಟಾಚಾರ(The File Report) ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದೆ.

ಈ ದೂರಿನ ಪ್ರತಿಯು ‘ದಿ ಫೈಲ್’ ಗೆ ಲಭ್ಯವಾಗಿದೆ. ಗುತ್ತಿಗೆದಾರರಿಂದ 40 ಪರ್ಸೆಂಟೇಜ್ ಕಮಿಷನ್ಗೆ ಬೇಡಿಕೆ ಇಟ್ಟಿದ್ದ ಪ್ರಕರಣವೂ,

ಇದನ್ನೂ ಓದಿ : https://vijayatimes.com/forced-religious-conversions/

ರಾಜ್ಯ ರಾಜಕೀಯದಲ್ಲಿ ಎದ್ದಿದ್ದ ಬಿರುಗಾಳಿಯ ಅಬ್ಬರ ಮುಂದುವರಿದಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಕ್ಷಗಟ್ಟಲೆ ಲಂಚ ನೀಡಲಾಗಿದೆ ಎಂಬ ಆರೋಪವೂ ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಪೀಪಲ್ ಮೀಡಿಯಾ ಜಾಲತಾಣವು ಪ್ರಕಟಿಸಿದ ವರದಿಯು ಮಾಧ್ಯಮ ಸಂಸ್ಥೆಗಳಲ್ಲಿ ತೀವ್ರ ಸಂಚಲನ ಎಬ್ಬಿಸಿತ್ತು.

ಈ ವರದಿಯ ನಂತರ ಲೇಖಕ ರಾಜಾರಾಂ ತಲ್ಲೂರು ಅವರು ಇದೊಂದು ಚುನಾವಣಾ ಪೂರ್ವ ಭ್ರಷ್ಟಾಚಾರವೆಂದು ಪರಿಗಣಿಸಬೇಕಲ್ಲದೆ ಲೋಕಾಯುಕ್ತ ತನಿಖೆ ನಡೆಸಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಜನಾಧಿಕಾರ ಸಂಘರ್ಷ ಪರಿಷತ್ ಕೂಡ ಲೋಕಾಯುಕ್ತರು ಮತ್ತು ಎಡಿಜಿಪಿ ಅವರಿಗೆ ಸಲ್ಲಿಸಿರುವ ದೂರು ಮಹತ್ವ ಪಡೆದುಕೊಂಡಿದೆ .

ದೂರಿನಲ್ಲೇನಿದೆ? : ರಾಜ್ಯದ ಹಲವಾರು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರಿಗೆ ಮುಖ್ಯಮಂತ್ರಿ ಕಚೇರಿಯೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ ಪಾಗೋಜಿ ಅವರ ಮೂಲಕ ನಗದು ಹಣವನ್ನು ನೀಡಲಾಗಿದೆ.

ವಿಶ್ವಸನೀಯ ಮೂಲಗಳ ಪ್ರಕಾರ ಡೆಕ್ಕನ್ ಹೆರಾಲ್ಡ್ ನ ಮುಖ್ಯ ವರದಿಗಾರ ಭರತ್ ಜೋಶಿಯವರಿಗೆ ತಲುಪಿಸಿದ್ದ ಸ್ವೀಟ್ ಬಾಕ್ಸ್ ನಲ್ಲಿಯೇ 1 ಲಕ್ಷ ₹ ನಗದನ್ನು ಕಳಿಸಲಾಗಿತ್ತು.

ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್ ಹೆರಾಲ್ಡ್ ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ ಪ್ರಜಾವಾಣಿಯ ಮುಖ್ಯ ವರದಿಗಾರ ವೈ.ಜಿ ಜಗದೀಶ್ ಎಂಬುವರಿಗೆ ಹಣ ತಲುಪಿಸಲಾಗಿತ್ತು.

https://www.facebook.com/Vijayatimeskannada/videos/1575287249571694/

ಈ ಬಗ್ಗೆ ಖುದ್ದು ವೈ.ಜಿ ಜಗದೀಶ್ ಅವರೇ ಮಾಧ್ಯಮದ ವಾಟ್ಸಪ್ ಗ್ರೂಪ್ ನಲ್ಲಿ ಹೇಳಿರುವ ಪ್ರಕಾರ, ಮುಖ್ಯಮಂತ್ರಿ ಕಚೇರಿಯಿಂದ ಹಣ ಬಂದಿದೆ. ಇವರು ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ದಂದು ಹಣವನ್ನು ಹಿಂತಿರುಗಿಸಲಾಗಿದೆ.

ಅಲ್ಲದೆ ವೈ ಜಿ ಜಗದೀಶ್ ಅವರೇ ಹೇಳಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ ಮತ್ತು ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ ಎಂದು ದೂರಿನಲ್ಲಿ ಆದರ್ಶ ಅಯ್ಯರ್ ಅವರು ದೂರಿನಲ್ಲಿ ವಿವರಿಸಿದ್ದಾರೆ.

ಮುಖ್ಯಮಂತ್ರಿ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸಿದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಟಿ ನೀಡಿದಂತಾಗಿದೆ.

ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ.

ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ದೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್ ವಿವರಿಸಿದೆ.

ಸರ್ಕಾರದ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ಧ ಹಲವಾರು ದೂರುಗಳು ನೀಡಿದ್ದರೂ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಿರಲಿಲ್ಲ ಮತ್ತು ಪ್ರಶ್ನಿಸುತ್ತಿರಲಿಲ್ಲ.

ಮಾಧ್ಯಮಗಳನ್ನು ಸರ್ಕಾರವು ಕೊಳ್ಳುತ್ತಿರುವ ಬಗ್ಗೆ ಬಹುತೇಕ ಜನರಿಗೆ ಅನುಮಾನವಿದೆ. ಈ ಪ್ರಕರಣವು ಆ ಅನುಮಾನವನ್ನು ಸಾಬೀತುಗೊಳಿಸಿದೆ.

ಇದು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತು ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿಯು ಹುನ್ನಾರ ನಡೆಸುತ್ತಿರುವ ಹಲವಾರು ಪ್ರಯತ್ನಗಳಲ್ಲಿ ಇದೂ ಕೂಡ ಒಂದಾಗಿದೆ.

ಇದನ್ನೂ ಓದಿ : https://vijayatimes.com/it-is-not-a-problem/

ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ತಕ್ಷಣವೇ ಲೋಕಾಯುಕ್ತರು ಈ ದೂರನ್ನಾಧರಿಸಿ ತನಿಖೆ ನಡೆಸಿ ಆಪಾದಿತ ಮುಖ್ಯಮಂತ್ರಿ ಮತ್ತು ಅವರ ಮಾಧ್ಯಮ ಸಂಯೋಜಕ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಜನಾಧಿಕಾರ ಸಂಘರ್ಷ ಪರಿಷತ್ ನ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಅವರು ದಿ ಫೈಲ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಸಚಿವರ ಕಚೇರಿಗಳಿಂದ ದೀಪಾವಳಿ ಇನಾಮಿನ ಜತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬ ವದಂತಿಗಳು ಹಬ್ಬಿವೆ.

ಇದು ಹೌದೆಂದಾದಲ್ಲಿ ಚುನಾವಣಾಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ.

ತಾವು ತಕ್ಷಣ ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ, ಆ ಬಗ್ಗೆ ಲೋಕಾಯುಕ್ತರು ತಕ್ಷಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಲೇಖಕ ರಾಜಾರಾಂ ತಲ್ಲೂರು ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Exit mobile version