Visit Channel

ಖಾತೆಯಲ್ಲಿ ಹಣವಿರದಿದ್ದರೂ ಚಿತ್ರ ಸಿದ್ಧ!

WhatsApp Image 2021-05-01 at 4.05.16 PM

ಬಿಡುಗಡೆಗೂ ಪೂರ್ವದಲ್ಲೇ ಶೀರ್ಷಿಕೆ ಮೂಲಕವೇ ಜನಪ್ರಿಯವಾಗಿರುವ ಚಿತ್ರ “ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ”‌.
ಸಾಗರ, ಸಿಗಂಧೂರು, ಬೆಂಗಳೂರಿನ ಸುಂದರ ಪರಿಸರದಲ್ಲಿ ಚಿತ್ರೀಕರಣಗೊಂಡಿದ್ದು ಸಂಪೂರ್ಣವಾಗಿ ಸಿದ್ಧವಾಗಿದೆ.

ಉಪ್ಪಿ ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಪತ್ರಕರ್ತ ವಿನಾಯಕ ಕೋಡ್ಸರ ನಿರ್ದೇಶನವಿದೆ. ಹಾಸ್ಯಮಯ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನಾಯಕ ಕೋಡ್ಸರ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರಜ್ವಲ್ ಪೈ ಅವರ ಸಂಗೀತ ನೀಡಿದ್ದಾರೆ. ರವೀಂದ್ರ ಜೋಶಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಂದ ಕಿಶೋರ್ ಎನ್ ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಅವರ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ. ನಿಜಜೀವನದ ಸತಿಪತಿ ದಿಗಂತ್ ಐಂದ್ರಿತಾ ರೇ ಈ ಚಿತ್ರದಲ್ಲಿ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಫವನ್, ಪಿ.ಡಿ.ಸತೀಶ್‌ ಚಂದ್ರ, ಪ್ರಕಾಶ್ ತುಮ್ಮಿನಾಡ್ ಹಾಗೂ ನೀನಾಸಂನ ಹಲವು ಕಲಾವಿದರು ‌ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.