ಕ್ರಿಕೆಟ್ ದೇವರನ್ನೂ ಬಿಡದ ಮಹಾಮಾರಿ: ಸಚಿನ್ ತೆಂಡೂಲ್ಕರ್ ಗೆ ಕೊರೊನಾ ಪಾಸಿಟಿವ್

ಬೆಂಗಳೂರು, ಮಾ. 27: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು, ಇದೀಗ
ಕ್ರಿಕೆಟ್ ದೇವರ ಹೆಗಲೇರಿದೆ.

ದೇಶಾದ್ಯಂತ ಕೊರೊನಾ 2ನೇ ಅಲೆಯ ಆತಂಕ ಮೂಡಿಸಿರುವ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿನ್ ತೆಂಡೂಲ್ಕರ್, ತಮ್ಮ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಮನೆಯ ಇತರೆ ಸದಸ್ಯರ ವರದಿ ನೆಗೆಟಿವ್ ಬಂದಿದೆ.

ಈ ಹಿನ್ನೆಲೆಯಲ್ಲಿ ವೈದ್ಯರು ನೀಡಿದ ಮಾರ್ಗಸೂಚಿಯಂತೆ
ತಾವು ಸ್ವಯಂ ಪ್ರೇರಿತರಾಗಿ ಮನೆಯಲ್ಲಿ ಕ್ವಾರೆಂಟೈನ್ ಆಗಿರುವುದಾಗಿ ತಿಳಿಸಿರುವ ಅವರು, ತಮಗೆ ಸಹಕರಿಸಿದ
ಹಾಗೂ ದೇಶದ ನಿರಂತರ ವೈದ್ಯಕೀಯ ಸೇವೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿನ ಆರಾಧ್ಯ ದೈವ ಎನಿಸಿರುವ ಸಚಿನ್ ತೆಂಡೂಲ್ಕರ್, ಇತ್ತೀಚೆಗೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ್ದರು.

Exit mobile version