• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 20: ಲಾಕ್ ಡೌನ್ ಸಂತ್ರಸ್ತರಿಗೆ ನೆರವು ನೀಡುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರೂಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ ಮಾತ್ರವಾಗಿದ್ದು, ಬಡವರಿಗೆ ನೆರವಾಗುವ ಉದ್ದೇಶ ಇದರಲ್ಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಂಬಿಕೆ ಇಲ್ಲ. ಕಳೆದ ಬಾರಿಯೂ ಇದೇ ರೀತಿ ಪರಿಹಾರ ಘೋಷಿಸಿದ್ದರು. ಚಾಲಕರು, ನೇಕಾರರು, ಸವಿತಾ ಸಮಾಜದವರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು ಟೀಕಿಸಿದರು.

ಬಡವರಿಗೆ ನೆರವಾಗುವ ಇಚ್ಛೆ ಸರಕಾರಕ್ಕೆ ಇರುವುದಾದರೆ ಕನಿಷ್ಠ ತಲಾ 10 ಸಾವಿರ ರುಪಾಯಿ ನೀಡಬೇಕು. ಪರಿಹಾರ ಮೊತ್ತ ವಿತರಣೆ ಜವಾಬ್ದಾರಿಯನ್ನು ಪಂಚಾಯ್ತಿಗೆ ನೀಡಲಿ. ಪಂಚಾಯ್ತಿ ಅವರು, ಪಾಲಿಕೆಯವರು ತಮ್ಮ ವ್ಯಾಪ್ತಿಯಲ್ಲಿರುವ ಸಾಂಪ್ರದಾಯಿಕ ವೃತ್ತಿ ಅವಲಂಬಿತರನ್ನು ಗುರುತಿಸಿ ಚೆಕ್ ಮೂಲಕ ಹಣ ನೀಡಿ ದಾಖಲೆಗೆ ಒಂದು ಫೋಟೋ ತೆಗೆದುಕೊಳ್ಳಲಿ. ಜನ ಯಾರೂ ಮೋಸ ಮಾಡುವುದಿಲ್ಲ. ಅದು ಬಿಟ್ಟು ಆಪ್ ಅಲ್ಲಿ ನೋಂದಣಿ ಮಾಡಿಸಿ, ಬ್ಯಾಂಕ್ ಮೂಲಕ ಪಾವತಿಸುತ್ತೇವೆ ಅಂದರೆ ಅದಾಗದ ಕೆಲಸ. ಶಿಕ್ಷಕರು, ಪಂಚಾಯ್ತಿ ಅವರನ್ನು ಬಳಸಿಕೊಂಡು ಹಣ ಹಂಚಲಿ. ಇಲ್ಲದಿದ್ದರೆ ಇದು ಕೇವಲ ಕಾಗದದ ಮೇಲಿನ ಘೋಷಣೆಯಾಗಿ ಉಳಿಯಲಿದೆ ಎಂದರು.

ಈ ಪ್ಯಾಕೇಜ್ ಅಲ್ಲಿ ಘೋಷಿಸಿರುವ 3 ಸಾವಿರ ಯಾವುದಕ್ಕೂ ಸಾಲುವುದಿಲ್ಲ. ನಾವು ಒತ್ತಡ ಹಾಕಿದ್ದೇವೆ ಎಂದು ಕಾಟಾಚಾರಕ್ಕೆ ಈ ಪ್ಯಾಕೇಜ್ ಘೋಷಿಸಲಾಗಿದೆ. ಇದು ಜನರ ಹಿತಕ್ಕಾಗಿ ಘೋಷಿಸಿದ ಪ್ಯಾಕೇಜ್ ಅಲ್ಲ. ರೈತರಿಗೆ ಬೆಂಬಲ ಬೆಲೆ ಏನಾದರೂ ಘೋಷಣೆ ಮಾಡಿದ್ದಾರಾ? ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದಾನೆ. ಬ್ಯಾಂಕ್ ಜತೆ ನೇರವಾಗಿ ಮಾತನಾಡಿದ್ದಾರಾ? ಬಡ್ಡಿ ಮನ್ನಾ ಮಾಡಿಸಿದ್ದಾರಾ? ಕಳೆದ ವರ್ಷ ಹೂ ಬೆಳೆಗಾರರಿಗೆ ಘೋಷಿಸಿದ 25 ಸಾವಿರ ರುಪಾಯಿ ಯಾರಿಗೆ ತಲುಪಿದೆ ಲೆಕ್ಕಕೊಡಲಿ. ಈಗ ಅದನ್ನು 10 ಸಾವಿರಕ್ಕೆ ಕುಗ್ಗಿಸಿದ್ದಾರೆ ಎಂದು ಟೀಕಿಸಿದರು.

ಯಾರು ಕೆಲಸ ಕಳೆದುಕೊಂಡಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ಮಾಡಲಿ. ಕಟ್ಟಡ ಕಾರ್ಮಿಕರಿಗೂ ಇವರು ಕೊಟ್ಟಿರುವುದು ಏನೇನೂ ಸಾಲದು. ಇದು ಬಡವರ ಬಗ್ಗೆ ಚಿಂತಿಸುವ ಸರ್ಕಾರ ಅಲ್ಲ. ನಾವು ಆಗ್ರಹಿಸಿದ್ದಕ್ಕೆ ಒಂದು ಪ್ಯಾಕೇಜ್ ಅಂತ ಘೋಷಿಸಿದ್ದಾರೆ. ಕಳೆದ ವರ್ಷದ ಪ್ಯಾಕೇಜ್ ವಿಫಲವಾಗಿದೆ. ಕಳೆದ ವರ್ಷ 7.5 ಲಕ್ಷ ಚಾಲಕರಲ್ಲಿ ಬರೀ ಒಂದು ಲಕ್ಷದಷ್ಟು ಮಂದಿಗೆ ಮಾತ್ರ ಕೊಟ್ಟಿದ್ದಾರೆ.

ಈ ಸರ್ಕಾರ ವಾಸ್ತವಕ್ಕೆ ಇಳಿದು ಕೆಲಸ ಮಾಡಲಿ.ಇಂದಿರಾ ಕ್ಯಾಂಟೀನ್ ನಲ್ಲಿ ಗುರುತಿನ ಚೀಟಿ ಕೊಟ್ಟು ಆಹಾರ ಪಡೆಯಲು ಹೇಳುತ್ತಾರೆ. ಇದು ಸಾಧ್ಯವಾ? ನಾವು ವಿರೋಧಿಸಿದ ನಂತರ ಅದನ್ನು ರದ್ದು ಮಾಡಿದರು. ಈಗ ಮತ್ತೆ ಗುರುತಿನ ಚೀಟಿ ಕೇಳುತ್ತಿದ್ದಾರೆ. ಸರ್ಕಾರದ ನಿರ್ವಹಣೆಯಲ್ಲಿ ನಮಗೆ ಸಮಾಧಾನವೂ ಇಲ್ಲ, ನಂಬಿಕೆಯೂ ಇಲ್ಲ. ಪರಿಹಾರ ನೀಡುವುದಾದರೆ, ಬಹಳ ವ್ಯವಸ್ಥಿತವಾಗಿ ಕೊಡಲಿ.

ಅಸಂಘಟಿತ ಕಾರ್ಮಿಕರು, ಹಳ್ಳಿಯಲ್ಲಿ ಕೆಲಸ ಮಾಡುವವರಿಗೆ ಏನೂ ಕೊಟ್ಟಿಲ್ಲ. ಗ್ರಾಮೀಣ ಭಾಗದಲ್ಲಿ ವಾರಿಯರ್ ಆಗಿ ಕೆಲಸ ಮಾಡುತ್ತಿರುವವರು, ವಾಟರ್ ಮನ್, ಲೈನ್ ಮನ್, ಮುನ್ಸಿಪಾಲಿಟಿ ಕಾರ್ಮಿಕರನ್ನು ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ವಿಮೆ ನೀಡಬೇಕು. ಅವರ ರಕ್ಷಣೆ ನೀಡಬೇಕು. ಒಂದೊಮ್ಮೆ ಅವರು ಮೃತಪಟ್ಟರೆ ಕುಟುಂಬದವರಿಗೆ ಪರಿಹಾರ ನೀಡಬೇಕು.

ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಪರೀಕ್ಷೆ ನಡೆಸಬೇಕು. ಕರ್ನಾಟಕ ರಾಜ್ಯ ಮತ್ತು ಬೆಂಗಳೂರಿನಂತಹ ರಾಜಧಾನಿಯಲ್ಲಿ ಅತಿ ಹೆಚ್ಚು ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳನ್ನು ಇಟ್ಟುಕೊಂಡು ಪರೀಕ್ಷೆ ನಡೆಸಲು ಆಗುವುದಿಲ್ಲ ಎಂದರೆ ಹೇಗೆ? ಇವರಿಂದ ಸಾಧ್ಯವಿಲ್ಲ ಎನ್ನುವ ಕಾರಣಕ್ಕೇ ಪ್ರಧಾನ ಮಂತ್ರಿಗಳು ಜಿಲ್ಲಾಧಿಕಾರಿಗಳ ಜತೆ ನೇರವಾಗಿ ಸಭೆ ನಡೆಸಿ, ಅವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿರುವುದಕ್ಕೆ ಇದೇ ಸಾಕ್ಷಿ. ರಾಜ್ಯ ನಾಯಕತ್ವದ ಬಗ್ಗೆ ಪ್ರಧಾನಿಗಳೂ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.