Visit Channel

Karnataka Lockdown; 11 ಜಿಲ್ಲೆಗಳಲ್ಲಿ ಮುಂದುವರೆದ ಲಾಕ್‌ಡೌನ್; ಏನೇನಿರುತ್ತೆ? ಏನೇನಿರಲ್ಲ?

vijaya-karnataka

ಬೆಂಗಳೂರು, ಜೂ. 11: 1 ತಿಂಗಳಿಗೂ ಹೆಚ್ಚು ಸಮಯದಿಂದ ಕರ್ನಾಟಕದಲ್ಲಿ ಲಾಕ್​ಡೌನ್ ಜಾರಿಯಲ್ಲಿದೆ. ದಿನದಿಂದ ದಿನಕ್ಕೆ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬರುತ್ತಿದ್ದರೂ ಸರ್ಕಾರ ನಿರೀಕ್ಷಿಸಿದ ಮಟ್ಟಿಗೆ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್​ಲಾಕ್​ ಘೋಷಿಸಲಾಗಿದೆ. ಆದರೆ, ಅನ್​ಲಾಕ್​ ಮಾಡಲಾಗಿರುವ ಜಿಲ್ಲೆಗಳಲ್ಲೂ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ? ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ…

ನಿನ್ನೆ ಜಿಲ್ಲಾಧಿಕಾರಿಗಳು ಹಾಗೂ ಸಚಿವರ ಜೊತೆ ಸಭೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 11 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಲಾಕ್​ಡೌನ್ ಮುಂದುವರೆಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಸೋಂಕು ಪ್ರಮಾಣ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ.

ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್ ನಿಯಮಗಳ ಮಾರ್ಗಸೂಚಿಗಳು ಈ 11 ಜಿಲ್ಲೆಗಳಿಗೆ ಅನ್ವಯವಾಗಲಿವೆ. ಅಗತ್ಯವಿದ್ದರೆ ಇನ್ನೂ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್​ಡೌನ್ ಮುಂದುವರೆಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಸೆಮಿ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ಅಂದರೆ, ಅನ್​ಲಾಕ್ ಆದರೂ ಕೆಲವು ವಲಯಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಕೆಲವು ನಿರ್ಬಂಧಗಳನ್ನೂ ವಿಧಿಸಲಾಗಿದೆ. ಅನ್​ಲಾಕ್​ ಇರುವ ಜಿಲ್ಲೆಗಳ ಪರಿಷ್ಕೃತ ಮಾರ್ಗಸೂಚಿಗಳು ಜೂನ್ 14ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಹಾಗಾದರೆ, ಅನ್​ಲಾಕ್ ಆಗುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಜೂನ್ 21ರವರೆಗೆ ಯಾವುದಕ್ಕೆಲ್ಲ ಅನುಮತಿ? ಯಾವುದಕ್ಕೆ ನಿರ್ಬಂಧ? ಇಲ್ಲಿದೆ ಮಾಹಿತಿ…

ಯಾವುದಕ್ಕೆ ಅನುಮತಿ?:

 1. ಎಲ್ಲಾ ಕಾರ್ಖಾನೆಗಳಲ್ಲಿ ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ
 2. ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ. 30ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ.
 3. ಎಲ್ಲಾ ಅಗತ್ಯ ಪದಾರ್ಥ ಖರೀದಿಸುವುದಕ್ಕೆ ಅನುವು ಮಾಡಿಕೊಡಲು ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ
 4. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ
  ನಿಮಾಣ ಚಟುವಟಿಕೆಗೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ
 5. ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ
 6. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ
 7. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಸಂಚರಿಸಲು ಅವಕಾಶ
 8. ಅಗತ್ಯವಿದ್ದರೆ ಅಂತರ್ ಜಿಲ್ಲೆ ಸಂಚಾರಕ್ಕೆ ಅನುಮತಿ

ಯಾವುದಕ್ಕೆ ಅನುಮತಿ ಇಲ್ಲ?:

 1. ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ
 2. ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೋವಿಡ್ ನೈಟ್ ಕರ್ಫ್ಯೂ ಜಾರಿ. ಈ ವೇಳೆ ಸಂಚಾರಕ್ಕೆ ನಿರ್ಬಂಧ
 3. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧ
 4. ಅಂತರ್ ರಾಜ್ಯ ಸಂಚಾರಕ್ಕೆ ನಿರ್ಬಂಧ

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಿರುವಂತೆ ಲಾಕ್​ಡೌನ್​ ಮಾರ್ಗಸೂಚಿಯನ್ನು ಜೂ 21ರವರೆಗೆ ಮುಂದುವರೆಸಬೇಕು. ಇದರಲ್ಲಿ ಯಾವುದೇ ಬದಲಾವಣೆಯೂ ಇರುವುದಿಲ್ಲ ಎಂದು ಸರ್ಕಾರ ಆದೇಶಿಸಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.