ಈ ಸರ್ಕಾರವು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ನೌಕರರಿಗೆ ಅರ್ಧ ದಿನ ರಜೆ ಘೋಷಿಸಿದೆ!

kashmir files

ದೇಶಾದ್ಯಂತ `ದ ಕಾಶ್ಮೀರ್ ಫೈಲ್ಸ್’(The Kashmir Files) ಸಿನಿಮಾ(Cinema) ಭಾರಿ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಈ ಸಿನಿಮಾ ಜನರಿಂದ ಶ್ಲಾಘನೆ(Appreciation)ಪಡೆದುಕೊಳ್ಳುತ್ತಿದ್ದರೆ, ಮತ್ತೊಂದೆಡೆ ರಾಜಕೀಯ(Political) ಮಾತುಗಳಿಗೆ ಕಾರಣವಾಗುತ್ತಿದೆ. ಸದ್ಯ ಈ ಸಿನಿಮಾ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ವೀಕ್ಷಿಸಿದ್ದಾರೆ. ತ್ರಿಪುರ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಬುಧವಾರದಂದು ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ.

ತ್ರಿಪುರ ರಾಜ್ಯ ಸರ್ಕಾರ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಪ್ರದರ್ಶನವನ್ನು ತೆರಿಗೆ ಮುಕ್ತಗೊಳಿಸಿದೆ. ಈ ಕುರಿತು ಶರ್ಮಾ ಟ್ವೀಟ್ ಮಾಡಿ, ನಮ್ಮ ಸರ್ಕಾರಿ ನೌಕರರು #TheKashmirFiles ಸಿನಿಮಾ ವೀಕ್ಷಿಸಲು ಅರ್ಧ ದಿನದ ವಿಶೇಷ ರಜೆಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ನೌಕರರು ತಮ್ಮ ಮೇಲಾಧಿಕಾರಿಗಳಿಗೆ ಮಾತ್ರ ತಿಳಿಸಬೇಕು ಮತ್ತು ಮರುದಿನ ಟಿಕೆಟ್‌ಗಳನ್ನು ಕಛೇರಿಗೆ ತೋರಿಸಬೇಕು ಎಂದು ಹೇಳಿದರು.

ಮತ್ತೊಂದು ಟ್ವೀಟ್‌ನಲ್ಲಿ, ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳು ಮತ್ತು BJP4Assam ಮತ್ತು ಮಿತ್ರಪಕ್ಷಗಳ ಶಾಸಕರೊಂದಿಗೆ ನಾನು ವೀಕ್ಷಿಸಿದ್ದ #TheKashmirFiles ಸಿನಿಮಾದಲ್ಲಿ ಅವರ ದುಃಸ್ಥಿತಿ, ಹೃದಯ ವಿದ್ರಾವಕ ಚಿತ್ರಣದಿಂದ ಪ್ರೇರಿತವಾಗಿದೆ. ಸತ್ಯವನ್ನು ಹಿಡಿದಿಟ್ಟುಕೊಂಡಿದ್ದಕ್ಕಾಗಿ ವಿವೇಕ್ ಅಗ್ನಿಹೋತ್ರಿ ಮತ್ತು ತಂಡಕ್ಕೆ ಅಭಿನಂದನೆಗಳು ಎಂದು ತಿಳಿಸಿದರು. 1990 ರಲ್ಲಿ ಕಾಶ್ಮೀರಿ ಪಂಡಿತರ ನಿರ್ಗಮನವನ್ನು ಆಧರಿಸಿದ ಚಲನಚಿತ್ರವು, ಮಾರ್ಚ್ 11 ರಂದು ಬಿಡುಗಡೆಯಾಯಿತು. ಚಿತ್ರದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ ಮತ್ತು ಪಲ್ಲವಿ ಜೋಶಿ ಇತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Exit mobile version