• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಸೇವಾಸಿಂಧು ಅರ್ಜಿ ಆಹ್ವಾನಕ್ಕೆ ಜು.9 ಕೊನೆಯ ದಿನ

Sharadhi by Sharadhi
in ಮನರಂಜನೆ
ಸೇವಾಸಿಂಧು ಅರ್ಜಿ ಆಹ್ವಾನಕ್ಕೆ ಜು.9 ಕೊನೆಯ ದಿನ
0
SHARES
0
VIEWS
Share on FacebookShare on Twitter

ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಘೋಷಿಸಿದ್ದ ಮೂರು ಸಾವಿರ ರೂಪಾಯಿ ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿಯವರು 2021ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂಪಾಯಿಗಳ ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ ಇಪ್ಪತ್ತೆರಡು ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು ಆರು ಕೋಟಿ ಅರವತ್ತು ಲಕ್ಷ ರೂಪಾಯಿಗಳನ್ನು ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.

ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ ಪೋರ್ಟಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ಹಾಗೆಯೇ, ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿಯು 2021ರ ಜುಲೈ 9ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಲಭ್ಯವಿದೆ. ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ.

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಇಲ್ಲವೆ dpmfilm1@gmail.com ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Related News

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023
ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ
ಪ್ರಮುಖ ಸುದ್ದಿ

ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ

May 24, 2023
‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ
ಪ್ರಮುಖ ಸುದ್ದಿ

‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ

May 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.