download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಕೊರೋನಾದಲ್ಲಿ ತಾಯಿ ಸತ್ತ ದುಃಖದಲ್ಲಿ ಆತ್ಮಹತ್ಯೆಗೆ ಶರಣಾದ ಮಕ್ಕಳು ಮತ್ತು ಪತಿ

ಸತೀಶ್​ ರೆಡ್ಡಿ​ ಅವರ ಪತ್ನಿ ಆಶಾ ಅವರ ಕೊರೊನಾ ರಿಪೋರ್ಟ್​​ ಪಾಸಿಟಿವ್​ ಬಂದಿತ್ತು. ಚಿಕಿತ್ಸೆಯ ಬಳಿಕವೂ ಚೇತರಿಸಿಕೊಳ್ಳದ ಆಶಾ ಅವರು ಮೇ 6ರಂದು ಕೊರೊನಾಗೆ ಬಲಿಯಾಗಿದ್ದರು. ಪತಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದರು. ಪುಟ್ಟ ಕುಟುಂಬಕ್ಕೆ ಬರ ಸಿಡಿಲು ಬಡಿದಂತೆ ಆಗಿತ್ತು. ಪತ್ನಿಯನ್ನು ಕಳೆದುಕೊಂಡು ಸತೀಶ್​ ರೆಡ್ಡಿ ಕಂಗಾಲಾಗಿದ್ದರು. ತಾಯಿಯ ಸಾವಿನಿಂದ ಇಬ್ಬರು ಹೆಣ್ಣು ಮಕ್ಕಳು ಖಿನ್ನತೆಗೆ ಒಳಗಾಗಿದ್ದರು.

ಆನೇಕಲ್, ಜೂ. 30: ಹೆಮ್ಮಾರಿ ಕೊರೊನಾ ಜನಸಾಮಾನ್ಯರ ಬದುಕಲ್ಲಿ ಬಿರುಗಾಳಿ ಎಬ್ಬಿಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿವೆ. ತಂದೆ-ತಾಯಿ ಇಬ್ಬರೂ ಕೊರೊನಾಗೆ ಬಲಿಯಾಗಿ ಮಕ್ಕಳು ಅನಾಥರಾಗಿದ್ದಾರೆ. ಇದೇ ರೀತಿ ಬೆಂಗಳೂರಿನ ಹೊರವಲಯ ಆನೇಕಲ್​​​ನಲ್ಲಿ ಕುಟುಂಬವೊಂದು ಸೋಂಕಿನಿಂದ ಸರ್ವನಾಶವಾಗಿದೆ. ತಂದೆ-ತಾಯಿ, ಇಬ್ಬರು ಹೆಣ್ಣು ಮಕ್ಕಳಿದ್ದ ಸುಂದರ ಕುಟುಂಬ ಇಂದು ಮಸಣ ಸೇರಿದೆ. ನೆಮ್ಮದಿಯಾಗಿದ್ದ ಬದುಕನ್ನು ವೈರಸ್​​​​​ ಅಲ್ಲೋಲ ಕಲ್ಲೋಲ ಮಾಡಿದೆ.

ಆನೇಕಲ್​​ ತಾಲೂಕಿನ ಅತ್ತಿಬೆಲೆಯಲ್ಲಿ ನೆಲೆಸಿದ್ದ ಸತೀಶ್​ ರೆಡ್ಡಿ​​ ಅವರ ಕುಟುಂಬಕ್ಕೆ ಕೊರೊನಾ ಯಮನಾಗಿ ಎಂಟ್ರಿ ಕೊಟ್ಟಿತ್ತು. ಸತೀಶ್​ ರೆಡ್ಡಿ​ ಅವರ ಪತ್ನಿ ಆಶಾ ಅವರ ಕೊರೊನಾ ರಿಪೋರ್ಟ್​​ ಪಾಸಿಟಿವ್​ ಬಂದಿತ್ತು. ಚಿಕಿತ್ಸೆಯ ಬಳಿಕವೂ ಚೇತರಿಸಿಕೊಳ್ಳದ ಆಶಾ ಅವರು ಮೇ 6ರಂದು ಕೊರೊನಾಗೆ ಬಲಿಯಾಗಿದ್ದರು. ಪತಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದರು. ಪುಟ್ಟ ಕುಟುಂಬಕ್ಕೆ ಬರ ಸಿಡಿಲು ಬಡಿದಂತೆ ಆಗಿತ್ತು. ಪತ್ನಿಯನ್ನು ಕಳೆದುಕೊಂಡು ಸತೀಶ್​ ರೆಡ್ಡಿ ಕಂಗಾಲಾಗಿದ್ದರು. ತಾಯಿಯ ಸಾವಿನಿಂದ ಇಬ್ಬರು ಹೆಣ್ಣು ಮಕ್ಕಳು ಖಿನ್ನತೆಗೆ ಒಳಗಾಗಿದ್ದರು. ಮನೆಯ ಒಡತಿಯಿಲ್ಲದೆ ಮನೆ ಸೊರಗಿತ್ತು.

ಮೇ 6ರಂದು ಆಶಾ ಅವರು ಇಹಲೋಕ ತ್ಯಜಿಸಿದಾಗಿನಿಂದ ಪತಿ, ಮಕ್ಕಳು ಅವರಿಲ್ಲದೆ ಬದುಕಲು ಇನ್ನಿಲ್ಲದಂತೆ ಯತ್ನಿಸಿದ್ದಾರೆ. ದಿನಗಳು ಉರುಳಿ, ವಾರಗಳು ಕಳೆದರೂ ಆಶಾರ ಸಾವು ಅವರನ್ನು ಕಾಡುತ್ತಲೇ ಇತ್ತು. ತಂದೆ-ಮಕ್ಕಳು ಮೂವರು ಖಿನ್ನತೆಗೆ ಒಳಗಾಗಿದ್ದರು. ಆಶಾ ಅವರ ಸಾವನ್ನು ಅರಗಿಸಿಕೊಳ್ಳಲು ಅವರಿಗೆ ಸಾಧ್ಯವೇ ಆಗಲಿಲ್ಲ. ಕೊನೆಗೆ ಇಂದು ಮೂವರು ಒಂದು ಕೆಟ್ಟು ನಿರ್ಧಾರ ತೆಗೆದುಕೊಂಡು ಬಿಟ್ಟಿದ್ದಾರೆ.

ಪತಿ ಸತೀಶ್​ ರೆಡ್ಡಿ  (45) ಹಾಗೂ ಮಕ್ಕಳಾದ ಕೀರ್ತಿ(19) , ಮೊನಿಷಾ(17) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಮೂವರು ನೇಣಿಗೆ ಶರಣಾಗಿದ್ದಾರೆ. ಕೊರೊನಾದಿಂದ ಆಶಾ ಸಾವನ್ನಪ್ಪಿದ್ದಕ್ಕೆ ಖಿನ್ನತೆಗೆ ಒಳಗಾಗಿದ್ದ ಕುಟುಂಬ ಸಾವಿನ ಹಾದಿ ಹಿಡಿದುಬಿಟ್ಟಿದೆ. ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಸುದ್ದಿ ಕೇಳಿ ಅಕ್ಕಪಕ್ಕದ ಮನೆಯವರು, ಸಂಬಂಧಿಕರು ದಿಗ್ಭ್ರಾಂತರಾಗಿದ್ದಾರೆ. ಸ್ಥಿತಿವಂತರಾಗಿದ್ದ ಕುಟುಂಬ ಕೊರೊನಾ ಕಾರಣದಿಂದ ದುರಂತ ಅಂತ್ಯ ಕಂಡಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article