ಈ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ 5 ರೂ ಇಳಿಕೆ

ಅಸ್ಸಾಂ, ಫೆ. 12: ಪೆಟ್ರೋಲ್, ಡಿಸೇಲ್ ದರ ದಿನೇ ದಿನೇ ದೇಶದೆಲ್ಲೆಡೆ ಹೆಚ್ಚುತ್ತಿರುವುದರಿಂದ, ವಿಪಕ್ಷಗಳು ಮತ್ತು ಜನರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಳಿಕೆ ಆಗುತ್ತಿರುತ್ತದೆ. ಇಂದೂ ಸಹ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 29 ಪೈಸೆ ಮತ್ತು 35 ಪೈಸೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್‌ ಆಯಿಲ್‌ ದರದ ಬೆಲೆ ಹೆಚ್ಚುತ್ತಿರುವುದರಿಂದ, ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗುತ್ತಿದೆ. ಆದರೆ ಇವುಗಳೆಲ್ಲದರ ನಡುವೆ ಅಸ್ಸಾಂ ತನ್ನ ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಇಳಿಕೆ ಮಾಡಿದೆ. ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ ಐದು ರೂ, ಕಡಿತಗೊಳಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ, ಅಸ್ಸಾಂ ಸರ್ಕಾರ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ₹5ರಷ್ಟು ಇಳಿಸಿದೆ ಮತ್ತು ಕರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮದ್ಯದ ಉತ್ಪನ್ನಗಳ ಮೇಲೆ ಹೇರಲಾಗಿದ್ದ 25% ಹೆಚ್ಚುವರಿ ತೆರಿಗೆಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ಈ ಬೆಲೆ ಇಂದು ಮಧ್ಯರಾತ್ರಿಯಿಂದ ಚಾಲ್ತಿಯಲ್ಲಿ ಬರಲಿದೆ ಎಂದು ಸರ್ಕಾರ ತಿಳಿಸಿದೆ.

Exit mobile version