download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಏರಿಕೆಯಾಗುತ್ತಿರುವ ಕೊರೊನಾ: ಕೇಂದ್ರದಿಂದ 6 ಸದಸ್ಯರ ತಂಡ ಭೇಟಿ

ಕೇರಳದಲ್ಲಿ ಈಗಲೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎನ್‌ಸಿಡಿಸಿ ನಿರ್ದೇಶಕರ ನೇತೃತ್ವದ 6 ಸದಸ್ಯರ ತಂಡವನ್ನು ಅಲ್ಲಿಗೆ ಕಳುಹಿಸಲಾಗುತ್ತಿದೆ.

ನವದೆಹಲಿ: ದೇಶದ ಬಹುತೇಕ ಕಡೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದ್ದರೂ, ಕೇರಳ ರಾಜ್ಯದಲ್ಲಿ ಮಾತ್ರ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಎಸ್ ಕೆ ಸಿಂಗ್ ನೇತೃತ್ವದ ತಂಡವು ಶುಕ್ರವಾರ ಕೇರಳ ತಲುಪಲಿದ್ದು, ಕೋವಿಡ್ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಲಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೇರಳದಲ್ಲಿ ಈಗಲೂ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎನ್‌ಸಿಡಿಸಿ ನಿರ್ದೇಶಕರ ನೇತೃತ್ವದ 6 ಸದಸ್ಯರ ತಂಡವನ್ನು ಅಲ್ಲಿಗೆ ಕಳುಹಿಸಲಾಗುತ್ತಿದೆ. ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೇರಳ ಸರ್ಕಾರಕ್ಕೆ ಕೇಂದ್ರ ತಂಡ ನೆರವು ನೀಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ಕೇಂದ್ರ ತಂಡವು ಕೇರಳದ ಆರೋಗ್ಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ ಮತ್ತು ವೈರಸ್ ಹರಡುವುದನ್ನು ತಡೆಗಟ್ಟಲು ಅಗತ್ಯವಾದ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಶಿಫಾರಸು ಮಾಡುತ್ತದೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article