ಕೇರಳ, ಜು. 17: ಕೊರೊನಾ ಕಾರಣದಿಂದಾಗಿ ಮುಚ್ಚಲಾಗಿರುವ ಕೇರಳದ ಶಬರಿಮಲೆ ದೇಗುಲದ ಬಾಗಿಲನ್ನು ತಿಂಗಳ ಪೂಜೆ ಸಲುವಾಗಿ ಐದು ದಿನ ತೆರೆಯಲು ಅನುಮತಿಸಲಾಗಿದೆ.
ಇಂದಿನಿಂದ ಜುಲೈ 21 ರವರೆಗೆ ದೇವಾಲಯ ತೆರೆದಿರುತ್ತದೆ. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.
ದೇವಾಲಯಕ್ಕೆ ಭೇಟಿ ನೀಡುವವರು ಕೋವಿಡ್ ಲಸಿಕೆ ಪ್ರಮಾಣಪತ್ರ ಅಥವಾ ದೇವಾಯಲಕ್ಕೆ ಭೇಟಿ ನೀಡುವ 48 ಗಂಟೆ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದ ನೆಗೆಟಿವ್ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.
ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಮೂಲಕ ಗರಿಷ್ಠ 5,000 ಭಕ್ತರಿಗೆ ಮಾತ್ರವೇ ಅವಕಾಶ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.