Visit Channel

ಸಾರಿಗೆ ನೌಕರರ ಸಂಬಳ ಇನ್ನೆರಡು ದಿನಗಳಲ್ಲಿ ಹಾಕುತ್ತೇವೆ: ಡಿಸಿಎಂ ಲಕ್ಷ್ಮಣ ಸವದಿ

savadi_1591000741

ಬೆಂಗಳೂರು, ಫೆ. 09: ಸಾರಿಗೆ ನೌಕರರ ಡಿಸೆಂಬರ್ ತಿಂಗಳ ಸಂಬಳ ಇನ್ನೆರಡು ದಿನದಲ್ಲಿ ಹಾಕುತ್ತವೆ. ಜನವರಿ ತಿಂಗಳ 15 ದಿನದ ಸಂಬಳ ಶೀಘ್ರವಾಗಿ ಹಾಕುತ್ತೇವೆ ಎಂದು ಡಿಸಿಎಂ ಲಕ್ಷಣ ಸವದಿ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲಾಖೆಯ ಆದಾಯವು ಇಂಧನ ಮತ್ತು ಸಂಬಳಕ್ಕೆ ಸರಿಯಾಗುತ್ತಿದೆ. ಸಂಬಳಕ್ಕೆ ಹಣಕಾಸು ಇಲಾಖೆ ಒಪ್ಪಿಕೊಂಡಿದೆ. ಎರಡು ದಿನದಲ್ಲಿ ಸರಿಯಾಗುತ್ತದೆ. ಯಾವುದೇ ಅಡ್ಡಿ ಆತಂಕವಿಲ್ಲದೆ ನಿಮ್ಮ ಸಂಬಳ ಕೊಡುವ ಕೆಲಸ ಮಾಡುತ್ತೇವೆ ಎಂದರು.

ಸಾರಿಗೆ ನೌಕರರ ಬುಧವಾರದ ಪ್ರತಿಭಟನೆ ಮಾಡುವ ಖಚಿತ ಮಾಹಿತಿಯಿಲ್ಲ. ನನ್ನನ್ನು ಯಾರು ಭೇಟಿ ಮಾಡಿಲ್ಲ ಮನವಿ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ನೋಡಿಯಷ್ಟೆ ನನಗೆ ಮಾಹಿತಿ ತಿಳಿದಿದೆ. ನಾನು ಅಧಿಕಾರಿಗಳನ್ನು ಕರೆಸಿ ಮಾತನಾಡಿದ್ದೇನೆ ಎಂದರು.

ಹಿಂದೆ ಪ್ರತಿಭಟನೆ ಮಾಡಿದಾಗ 9 ಬೇಡಿಕೆ ಇಟ್ಟಿದ್ದರು. ಅದರಲ್ಲಿ ನಾಲ್ಕು ಬೇಡಿಕೆ ಇಡೇರಿಸಿದ್ದೇವೆ. ಐದು ಸಭೆ ನಡೆಸಿದ್ದೇವೆ ಅದು ಅವರಿಗೂ ಗೊತ್ತು. ಇನ್ನು 15 ದಿನದಲ್ಲಿ ನೌಕರರ ಜೊತೆ ಆರನೇ ಸಭೆ ನಡೆಸಿ ವೇತನ ಪರಿಷ್ಕರಣೆ ಬಗ್ಗೆಯು ಮಾತನಾಡುತ್ತೇನೆ ಎಂದು ಸಚಿವರು ಹೇಳಿದರು. ಯಾವುದೆ ಸಾಲ‌ ಪಡೆಯಲು ಆಸ್ತಿ ಅಡಮಾನ ಇಡಬೇಕಾಗುತ್ತದೆ. ಅದಕ್ಕಾಗಿ ಬಿಎಂಟಿಸಿ ಶಾಂತಿನಗರ ಕಟ್ಟಡವನ್ನು ಅಡಮಾನ ಮಾಡಲಾಗಿದೆ ಎಂದರು ಹೇಳಿದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.