ದೇಶದಲ್ಲಿ ಎಲ್ಲೆ‌ ಮೀರುತ್ತಿದೆ ಕೊರೊನಾ‌ ಎರಡನೇ ಅಲೆ: ನಿನ್ನೆ ಒಂದೇ ದಿನ 4,14,188 ಮಂದಿಗೆ ಕೊರೊನಾ ಸೋಂಕು ಪತ್ತೆ

ಹೊಸದಿಲ್ಲಿ, ಮೇ. 07: ದೇಶದಲ್ಲಿ ದಿನೇ ದಿನೇ ಕೊರೋನಾ 2ನೇ ಅಲೆ ಅಬ್ಬರಿಸುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮತ್ತೆ ಹೊಸದಾಗಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 4,14,188 ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.  ಈ ಮೂಲಕ ದೇಶದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 2,14,91,598ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,915 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಗೆ ಬಲಿಯಾದವರ ಸಂಖ್ಯೆ 2,34,083ಕ್ಕೆ ಏರಿಕೆಯಾಗಿದೆ. ಇದುವರೆಗೆ 1,76,12,351 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿರುವ ಒಟ್ಟು ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ 36,45,164 ಆಗಿದೆ. ಇದುವರೆದೆ 16,49,73,058 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಎಲ್ಲೆಡೆ ಕಟ್ಟುನಿಟ್ಟಿನ ಕ್ರಮ
ಕೊರೊನಾ ಎರಡನೇ ಅಬ್ಬರ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ‌ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಪರಿಣಾಮ ಸಂಪೂರ್ಣ ಲಾಕ್‌ಡೌನ್‌ ವಿಧಿಸುವ ಸಾಧ್ಯತೆ ಕೂಡ ಹೆಚ್ಚಾಗಿದೆ.

Exit mobile version