download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಇಂದು ಸಂಜೆ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು, ಜು. 20: ಕೊರೋನಾ ಆತಂಕದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿರಲಿಲ್ಲ. ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಹಾಗೂ ಆಂತರಿಕ ಅಂಕಗಳ ಮೌಲ್ಯ ಮಾಪನ ನಡೆಸಿ ಫಲಿತಾಂಶ ಪ್ರಕಟ ಮಾಡಲಾಗುತ್ತಿದೆ. ಅದರಂತೆ ಇಂದು ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ. ಆನ್​ಲೈನ್​ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು,  http://pue.kar.nic.in/ ವೈಬ್ ಸೈಟ್ ಮೂಲಕ ನೋಡಬಹುದಾಗಿದೆ. ಈಗಾಗಲೇ Know My Register Number ಮೂಲಕ ರಿಜಿಸ್ಟರ್​ ನಂಬರ್​ನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ.

ಇಂದು ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳಿಗೆ ಒಪ್ಪಿಗೆ ಇಲ್ಲವಾದರೆ ಆಗಸ್ಟ್​ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಆಗ ಅವರು ಎಕ್ಸಾಂ ಬರೆಯಬಹುದಾಗಿದೆ. ಪರೀಕ್ಷೆಯ ಫಲಿತಾಂಶವನ್ನೂ ತಿರಸ್ಕರಿಸುವ ವಿದ್ಯಾರ್ಥಿಗಳಿಗೆ ಮತ್ತೆ ಹಳೇ ಅಂಕ ಪಡೆಯಲು ಅವಕಾಶ ಇಲ್ಲ ಎಂದು ಪಿಯು ಮಂಡಳಿ ಸ್ಪಷ್ಟವಾಗಿ ತಿಳಿಸಿದೆ.

ಇಂದು 5 ಲಕ್ಷದ 90 ಸಾವಿರದ 153 ಹೊಸ ವಿದ್ಯಾರ್ಥಿಗಳು ಮತ್ತು 76 ಸಾವಿರದ 344 ರಿಪೀಟರ್ಸ್ ಸೇರಿದಂತೆ ಒಟ್ಟು 6 ಲಕ್ಷ 66 ಸಾವಿರದ 497 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.

ಈ ವರ್ಷ ದ್ವಿತೀಯ ಪಿಯುಸಿಗೆ ಪರೀಕ್ಷೆ ನಡೆಸದೇ ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶ ನೀಡುವುದಾಗಿ ಈ ಹಿಂದೆ ಸರ್ಕಾರ ಘೋಷಿಸಿತ್ತು. ಆದರೆ ಬಳಿಕ ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡುವುದಾಗಿ ಹೇಳಿತ್ತು. ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳ ಎಸ್​ಎಸ್​ಎಲ್​ಸಿ, ಪ್ರಥಮ ಪಿಯುಸಿ ಅಂಕಗಳನ್ನು ಮಾನದಂಡವನ್ನಾಗಿ ಪರಿಗಣಿಸಿ, ವೃತ್ತಿಪರ ಕೋರ್ಸ್​ಗೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಮಾತ್ರ ಪರಿಗಣಿಸುವುದಾಗಿ ಹೇಳಿದೆ.

ಈ ಬಾರಿ ಯಾವುದೇ ರ್ಯಾಂಕ್​ ಇರುವುದಿಲ್ಲ. ಸಿಬಿಎಸ್​ಇ ಮಾದರಿಯಲ್ಲಿ ಎಸ್​ಎಸ್​ಎಲ್​ಸಿ, ಪ್ರಥಮ ಪಿಯು ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲಾಗುತ್ತದೆ. ಗ್ರೇಡ್​ ಬದಲು ಅಂಕಗಳ ಆಧಾರದಲ್ಲಿ ದ್ವಿತೀಯ ಪಿಯು ಫಲಿತಾಂಶವನ್ನು ಕೊಡಲಾಗುತ್ತದೆ.

ಫಲಿತಾಂಶ ನೋಡುವುದು ಹೇಗೆ? (How to Check PU Result)ಪ್ರತಿ ವರ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದ ರಿಜಿಸ್ಟರ್​ ನಂಬರ್​ ಮೂಲಕ ಫಲಿತಾಂಶವನ್ನು ನೋಡುತ್ತಿದ್ದರು. ಆದರೆ, ಈ ಬಾರಿ ಪರೀಕ್ಷೆ ಬರೆಯದೇ ಯಾವ ರಿಜಿಸ್ಟರ್​ ನಂಬರ್​ ಮೂಲಕ ಫಲಿತಾಂಶ ನೋಡುವುದು ಎಂಬ ಗೊಂದಲ ಇದೆ. ಇದೇ ಕಾರಣಕ್ಕೆ ಪಿಯು ಮಂಡಳಿ ಈ ಬಾರಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರತ್ಯೇಕ ರಿಜಿಸ್ಟರ್​ ನಂಬರ್​ ಸೃಷ್ಟಿಸಿದೆ. ಇದನ್ನು ಕೂಡ ಮಂಡಳಿಯ ವೆಬ್​ಸೈಟ್​ ಮೂಲಕವೇ ಪಡೆಯಬೇಕಾಗಿದೆ. ಈಗಾಗಲೇ ಈ ರಿಜಿಸ್ಟರ್​ ನಂಬರ್​ ಪಡೆಯಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಹಾಗೂ ಆಯಾ ಕಾಲೇಜಿಗೆ ಫಲಿತಾಂಶದ ಮಾಹಿತಿ ನೀಡಲಾಗುತ್ತದೆ. ಫಲಿತಾಂಶಕ್ಕೂ ಮುನ್ನ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್​ನ್ನು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಚೆಕ್‌ ಮಾಡಿ ನಂತರ ರಿಸಲ್ಟ್​ ಪಡೆಯಬೇಕು.

ಮಂಡಳಿಯ ವೆಬ್​ಸೈಟ್ http://pue.kar.nic.in/​ ತೆರೆದ ಕೂಡಲೇ ನಿಮಗೆ Know my Register Number ಎಂಬ ಲಿಂಕ್​ ಸಿಗುತ್ತದೆ. ಅದನ್ನು ಕ್ಲಿಕ್​ ಮಾಡಿದರೆ ಅದರ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಗೂ ರಿಜಿಸ್ಟರ್ ನಂಬರ್​ ಸಿಗಲಿದೆ. ಈ ಲಿಂಕ್​ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article